ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಭಾರೀ ಏರಿಕೆ ಕಂಡುಬರುತ್ತಿದ್ದು, ಇಂದು ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 49,058 ಜನರಲ್ಲಿ ಸೋಂಕು ದೃಢವಾಗಿದ್ದರೆ 328 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಎಂದಿನಂತೆ ಇಂದೂ ಕೂಡ ಬೆಂಗಳೂರಿನಲ್ಲಿ ಅತಿ ಹೆಚ್ಚು, 23,706 ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ 139 ಗುರುವಾರ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಇದೊಂದೇ ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 7,145ಕ್ಕೆ ಏರಿದ್ದರೆ ಒಟ್ಟು ಪ್ರಕರಣಗಳ ಸಂಖ್ಯೆ 8,87,086ಕ್ಕೆ ಹೆಚ್ಚಳವಾಗಿದೆ. ಅದರಲ್ಲಿ 5,47,208 ಸೋಂಕಿತರು ಗುಣಮುಖವಾಗಿದ್ದು, 3,32,732 ಸಕ್ರಿಯ ಪ್ರಕರಣಗಳು ಬಾಕಿಯಿವೆ.
ರಾಜ್ಯದಲ್ಲಿ ಈವರೆಗೆ ಪತ್ತೆಯಾದ ಒಟ್ಟಾರೆ ಸೋಂಕಿತರ ಸಂಖ್ಯೆ 17,90,104ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 12,55,797 ಮಂದಿ ಗುಣಮುಖವಾಗಿದ್ದರೆ 5,17,075 ಸಕ್ರಿಯ ಪ್ರಕರಣ ಬಾಕಿಯಿದೆ. ಈವರೆಗೆ ಒಟ್ಟು 17,212 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಆಕ್ಸಿಜನ್ ಕೊರತೆಯಿಂದ ಒಬ್ಬರೂ ಸಾಯದಂತೆ ನೋಡಿಕೊಳ್ಳುತ್ತೇನೆ: ಅರವಿಂದ ಕೇಜ್ರಿವಾಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 1 =
Remember me
