ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ವಿರುದ್ಧ ಕೇಂದ್ರಿಯಾ ತನಿಖಾ ಸಂಸ್ಥೆ(CBI) ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯುವ ಪ್ರಸ್ತಾವನೆಗೆ ರಾಜ್ಯ ಕಾಂಗ್ರೆಸ್​ ಸರ್ಕಾರ ಅಸ್ತು ಎಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ರಾಜ್ಯ ಗೃಹ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಇದಲ್ಲದೆ ಸಿಬಿಐ ತನಿಖೆಯನ್ನು ಹಿಂಪಡೆಯಲು ಕೋರಿದಲ್ಲದೆ ತನಿಖೆಯನ್ನು ರಾಜ್ಯ ಪೊಲೀಸ್​ ಇಲಾಖೆ ಅಥವಾ ಲೋಕಾಯುಕ್ತಗೆ ಒಪ್ಪಿಸುವಂತೆ ಪ್ರಸ್ತಾವನೆಯಲ್ಲಿ ಕೋರಲಾಗಿದೆ ಎಂದು ಉನ್ನತ ಸುದ್ದಿ ಮೂಲಗಳು ತಿಳಿಸಿವೆ.
2019ರಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಅಕ್ರಮ ಆಸ್ತಿ ಗಳಿಕೆ ಸಂಬಂಧ ಡಿ.ಕೆ. ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿತ್ತು. ಈಗಾಗಲೇ ಶೇ.90 ರಷ್ಟು ತನಿಖೆಯನ್ನು ಪೂರ್ಣಗೊಳಿಸಲಾಗಿದ್ದು, ರಾಜ್ಯದಲ್ಲಿನ ತನಿಖಾ ಸಂಸ್ಥೆಗಳಿಗೆ ಪ್ರಕರಣವನ್ನು ವಹಿಸಲು ಸಿದ್ದತೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 + five =
Remember me
