ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ ಎರಡು ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇಂದು ಸಾಯಂಕಾಲ ಬಹಿರಂಗ ಪ್ರಚಾರ ಕೊನೆಗೊಳ್ಳಲಿದ್ದು, ಮೇ 10ರಂದು ಸಾರ್ವತ್ರಿಕ ಮತದಾನ ನಡೆಯಲಿದೆ. ಜನರ ಓಡಾಟಕ್ಕೆ ಸಹಾಯವಾಗಲಿ ಎಂದು ಬಿಎಂಆರ್​ಸಿಎಲ್​ ಮೆಟ್ರೊ ರೈಲು ತನ್ನ ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಿದೆ.
ಇದನ್ನೂ ಓದಿ:ಬಿಜೆಪಿ ಪರ ಲಿಂಗಾಯತ ಮುಖಂಡರಿಂದ ಮತಯಾಚನೆ; ಡಾ. ವಿಜಯ ಸಂಕೇಶ್ವರ, ಪ್ರಲ್ಹಾದ ಜೋಶಿ ಭಾಗಿ
ಮೇ.11ರ ರಾತ್ರಿ 12 ಗಂಟೆ 05 ನಿಮಿಷಕ್ಕೆ ಟರ್ಮಿನಲ್ ನಿಲ್ದಾಣಗಳಾದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್​ಫೀಲ್ಡ್​ (ಕಾಡುಗೋಡಿ)ನಿಂದ ಕೊನೆಯ ರೈಲು ಹೊರಡಲಿದೆ.ಇನ್ನು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ನಿಂದ ಮೇ 11ರ ರಾತ್ರಿ 12 ಗಂಟೆ 35 ನಿಮಿಷಕ್ಕೆ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಅಂದರೆ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ, ಸಂಸ್ಥೆಗೆ ಹೊರಡಲಿದೆ.
ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಕರ ಬೆಂಬಲಕ್ಕೆ ನಿಲ್ಲುವ ಬಿಎಂಆರ್​ಸಿಎಲ್ ಈ ಬಾರಿಯೂ ತನ್ನ ಸೇವೆಯನ್ನು ವಿಸ್ತರಿಸಲು ಮುಂದಾಗಿದೆ. ಈ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಬಿಎಂಆರ್​ಸಿಎಲ್​ ಪ್ರಕಟಣೆ ಹೊರಡಿಸಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 1 =
Remember me
