ಬೆಂಗಳೂರು:ಕರ್ನಾಟಕ ಚುನಾವಣೆ ಹಿನ್ನೆಲೆ ಮತ ಏಣಿಕೆ ನಡೆಯುತ್ತಿದೆ. ಕಾಂಗ್ರೆಸ್​, ಜೆಡಿಎಸ್​​, ಬಿಜೆಪಿ ಅಭ್ಯರ್ಥಿಗಳು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ. ಹಿನ್ನಡೆ ಪಡೆದುಕೊಂಡಿರುವ ನಾಯಕರಿಗೆ ಈಗಾಗಲೇ ಸೋಲಿನ ಭೀತಿ ಶುರುವಾಗಿದೆ.
ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವಿನ ಗದ್ದುಗೆ ಕಾದಾಟ ಎನ್ನುವುದಕ್ಕಿಂತ ಸಹೋದರ ನಡುವೆ ನಡೆಯುತ್ತಿರುವ ಒಂದು ರಾಜಕೀಯ ಹೋರಾಟವಾಗಿದೆ. ಬಿಜೆಪಿ ಅಭ್ಯರ್ಥಿ ಕುಮಾರ್​​ ಬಂಗಾರಪ್ಪ ಅವರು ಭಾರಿ ಹಿನ್ನಡೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಮಧು ಬಂಗಾರಪ್ಪ ಭಾರಿ ಮುನ್ನಡೆ ಪಡೆದಿದ್ದಾರೆ.
ಸೊರಬ ಕ್ಷೇತ್ರದಲ್ಲಿ ನಡೆಯುತ್ತಿರುವ ಹೋರಾಟ ಸಹೋದರರ ನಡುವೆಯ ಜಟಾಪಟಿಯಾಗಿದೆ. ಸೊರಬ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ 51,091 ಮತ. ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ 28,125 ಮತ. ಮಧು ಬಂಗಾರಪ್ಪ ಅವರು 22,966 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. ಸೊರಬದಲ್ಲಿ ಮಧು ಬಂಗಾರಪ್ಪ ಗೆಲುವಿನತ್ತ ಮುನ್ನುಗುತ್ತಿದ್ದಾರೆ.
2018ರ ಫಲಿತಾಂಶ ಏನಿತ್ತು?2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.
ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್​​ ಅಭ್ಯರ್ಥಿ ಎನ್​. ಟಿ ಶ್ರೀನಿವಾಸ್​ ಗೆಲುವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + 5 =
Remember me
