ನವದೆಹಲಿ:ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ದೆಹಲಿಯ ಪಕ್ಷದ ಕಚೇರಿಯಲ್ಲಿ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ನಾಯಕ ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಕೆ. ಅಣ್ಣಾಮಲೈ, ಪಕ್ಷದ ಹಿರಿಯ ನಾಯಕ ಮನ್ಸುಖ್ ಮಾಂಡವೀಯ ಮುಂತಾದವರು ಉಪಸ್ಥಿತರಿದ್ದರು.
ಒಟ್ಟು 52 ಹೊಸ ಮುಖಗಳಿಗೆ ಬಿಜೆಪಿ ಈ ಬಾರಿ ಮಣೆ ಹಾಕಿದೆ. ಟಿಕೆಟ್ ಪಡೆದವರಲ್ಲಿ 8 ಜನ ಮಹಿಳೆಯರಿದ್ದಾರೆ. ಇತರ ಹಿಂದುಳಿದ ವರ್ಗಗಳ 32 ಜನರಿಗೆ, ಪರಿಶಿಷ್ಟ ಜಾತಿಯ 30, ಪರಿಶಿಷ್ಟ ಪಂಗಡದ 16 ಜನರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ.
ಕಳೆದ ಮೂರು ದಿನಗಳಿಂದ ರಾಜ್ಯ ಬಿಜೆಪಿ ನಾಯಕರು ಮತ್ತು ಪಕ್ಷದ ವರಿಷ್ಠರ ಹಲವು ಸುತ್ತಿನ ಸಭೆಗಳು ನಡೆದಿದ್ದು, ಸಾಕಷ್ಟು ಚರ್ಚೆಯ ನಂತರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಕ್ಕಿದೆ ಎಂಬುದರ ಪೂರ್ಣ ವಿವರ ಈ ಕೆಳಗಿನಂತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 5 =
Remember me
