ಶಿವಮೊಗ್ಗ :ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಪಕ್ಷಾಂತರ ಪರ್ವ, ರಾಜೀನಾಮೆ ಪ್ರಹಸನ ಜೋರಾಗಿಯೇ ನಡೆಯುತ್ತಿದ್ದು, ರಾಜ್ಯ ಬಿಜೆಪಿಗೆ ಇದೀಗ ಮತ್ತೊಂದು ಹಿನ್ನಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಯನೂರು ಮಂಜುನಾಥ್ ಎಂಎಲ್‌ಸಿ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಆಯನೂರು ಮಂಜುನಾಥ್ ಅವರು ಇಂದು ಮಧ್ಯಾಹ್ನ ಬಿಜೆಪಿ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಬೆನ್ನಲ್ಲೇ ಜೆಡಿಎಸ್ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ.ಎಚ್ ಡಿ ಕುಮಾರಸ್ವಾಮಿ ಅವರು ಆಯನೂರು ಮಂಜುನಾಥ್ ಅವರಿಗೆ ಬಿ ಫಾರ್ ನೀಡಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಲಿದ್ದಾರೆ.
ಇದನ್ನೂ ಓದಿ:ಐಷಾರಾಮಿ ಮನೆ ಖರೀದಿಸಿದ ನಟ ಉಪೇಂದ್ರಮಂಜುನಾಥ್ ಅವರನ್ನು ಶಿವಮೊಗ್ಗದಿಂದ ಕಣಕ್ಕಿಳಿಸುವುದಿಲ್ಲ ಎಂದು ಪಕ್ಷ ದೃಢಪಡಿಸಿದ ಬಳಿಕ ಅವರ ರಾಜೀನಾಮೆ ಘೋಷಣೆ ಹೊರಬಿದ್ದಿತ್ತು. ‘ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸುತ್ತೇನೆ. ಗುರುವಾರ ಶಿವಮೊಗ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದೇನೆ. ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೆ ಎಂಬುದನ್ನು ಮಧ್ಯಾಹ್ನದೊಳಗೆ ಪ್ರಕಟಿಸುತ್ತೇನೆ’ ಎಂದು ಆಯನೂರು ಮಂಜುನಾಥ್ ಹೇಳಿದ್ದರು. ಅದರಂತೆ ಇದೀಗ ಅಧಿಕೃತವಾಗಿ ಜೆಡಿಎಸ್​​ಗೆ ಸೇರ್ಪಡೆಗೊಂಡಿದ್ದಾರೆ.
ಬೊಮ್ಮಾಯಿ‌ ಮಾಮಾ ನಾಮ್ ಕೆ ವಾಸ್ತೆ‌ ಅಲ್ಲ..ಕಾಮ್ ಕೆ ವಾಸ್ತೆ‌: ಸುದೀಪ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 20 =
Remember me
