ಬೆಂಗಳೂರು:ಜಯಪ್ರಕಾಶ್ ಹೆಗ್ಡೆ ಅವರನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರುನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ನ.26ಕ್ಕೆ ಹೆಗ್ಡೆ ಅವರ ಅವಧಿ ಅಂತ್ಯವಾಗಲಿದೆ. ಅಧ್ಯಕ್ಷರ ಅವಧಿ ವಿಸ್ತರಣೆಗೆ ಅವಕಾಶವಿಲ್ಲದ ಕಾರಣ ಹಾಲಿ ಅಧ್ಯಕ್ಷರನ್ನೇ ಜ.31ರವರೆಗೆ ಅನ್ವಯ ಆಗುವಂತೆ ಮರುನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಆಯೋಗಕ್ಕೆ ಈ ಹಿಂದೆ ಅಧ್ಯಕ್ಷರಾಗಿದ್ದ ಕಾಂತರಾಜ, ಜಾತಿ ಗಣತಿ ವರದಿ ಸಿದ್ಧಪಡಿಸಿದ್ದರು. ಆದರೆ, ಆಯೋಗದ ಸದಸ್ಯ ಕಾರ್ಯದರ್ಶಿ ಸಹಿ ಮಾಡಿರಲಿಲ್ಲ. ಹೀಗಾಗಿ ವರದಿಗೆ ಆಧಾರವಾದ ದತ್ತಾಂಶ ಆಧರಿಸಿ ಆಯೋಗವು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಉದ್ದೇಶಿಸಿದೆ. ಡಿಸೆಂಬರ್‌ನಲ್ಲಿ ವರದಿ ಸಲ್ಲಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಸಿಎಂಗೆ ಪತ್ರ ಬರೆದಿದ್ದ ಹೆಗ್ಡೆಈ ಸಂಬಂಧ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ನ.22ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿಯು 2023ರ ನವೆಂಬರ್‌ 26ರಂದು ಮುಕ್ತಾಯಗೊಳ್ಳಲಿದೆ. ಪ್ರಸ್ತುತ ಆಯೋಗವು 2015ರ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ತಯಾರಿಸುವ ಪ್ರಕ್ರಿಯೆಯಲ್ಲಿದೆ. ಈ ವರದಿಯನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ಸಲ್ಲಿಸಲು ಕಾಲಾವಕಾಶ ಬೇಕಿದ್ದು, ಪ್ರಸ್ತುತ ಆಯೋಗವನ್ನು ಮುಂದುವರಿಸಬೇಕು ಎಂದು ಕೋರಿದ್ದರು ಎಂದು ಹೇಳಲಾಗಿದೆ.
ವರದಿಗಳ ಪ್ರಕಾರ, ಈ ಹಿಂದೆಯೇ ಸಿದ್ದರಾಮಯ್ಯ ಈ ಸಂಬಂಧ ಮೌಖಿಕವಾಗಿ ಮುಂದುವರಿಯುಂತೆ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಸೂಚಿಸಿದ್ದಾರೆ. ಆದರೆ, ಈ ಸಂಬಂಧ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿರಲಿಲ್ಲ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ಮಹತ್ವದ ನಿರ್ಣಯ ಕೈಗೊಂಡಿದೆ. ಈ ಮೂಲಕ ಡಿಸೆಂಬರ್‌ ಒಳಗೆ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ಸರ್ಕಾರ ಚಿಂತನೆ ನಡೆಸಿದೆ.
#CasteCensus@siddaramaiah@INCKarnatakaGovt. Extends the term of Jayaprakash Hegde as chairman of state backward classes commission up to Jan.31, 2024.It's in the wake of the Govt that is planning to accept the caste survey.@XpressBengaluru@AshwiniMS_TNIEpic.twitter.com/NGodqzUIpk
— Devaraj Hirehalli Bhyraiah (@swaraj76)November 24, 2023

3 ಬ್ಯಾಂಕ್‌ಗಳಿಗೆ 10 ಕೋಟಿ ರೂ.ದಂಡ ವಿಧಿಸಿದ ಆರ್‌ಬಿಐ; ನವೆಂಬರ್‌ನಲ್ಲಿಯೇ ಒಂದೂವರೆ ಡಜನ್ ಸಹಕಾರಿ ಬ್ಯಾಂಕ್‌ಗಳಿಗೆ ಫೈನ್


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − sixteen =
Remember me
