ಬೆಂಗಳೂರು: ಕರೊನಾ ವೈರಸ್ ಸೋಂಕು ಪೀಡಿತರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದ ಒಂಭತ್ತು ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿ ನಿಯಂತ್ರಣಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿದೆ. ಇನ್ನುಳಿದಂತೆ ಇಡೀ ಕರ್ನಾಟಕ ಬಂದ್ ಆಗಿರಲಿದೆ. ನೆರೆ ರಾಜ್ಯಗಳನ್ನು ಸಂಪರ್ಕಿಸುವ ಎಲ್ಲ ಗಡಿಗಳನ್ನೂ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ.
ವಿಧಾನಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಯಲ್ಲಿ ಈ ಸಂಬಂಧ ಹೇಳಿಕೆ ನೀಡಿದ್ದು, ಮಾರ್ಚ್ ೩೧ರವರೆಗೆ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗುವುದು.‌ ರಾಜ್ಯಾದ್ಯಂತ ಸರ್ಕಾರಿ ಬಸ್ ಸೇವೆ ಬಂದ್ ಮಾಡಲಾಗುವುದು. ಬಡವರಿಗೆ ಆಹಾರ ಧಾನ್ಯ ಪೂರೈಸಲಾಗುವುದು. ಎಲ್ಲ ಧಾರ್ಮಿಕ ಕಾರ್ಯಕ್ರಮ ರದ್ದುಪಡಿಸಲಾಗಿದೆ. ಅಗತ್ಯ ಕಚೇರಿಗಳಷ್ಟೇ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಇದುವರೆಗೆ 27 ಕರೊನಾ ಪ್ರಕರಣಗಳು ದಾಖಲಾಗಿದೆ. ನಿರ್ಬಂಧ ಇದ್ದರೂ ಸಹ ಸಾರ್ವಜನಿಕರು ಸರಿಯಾದ ರೀತಿಯಲ್ಲಿ ಸ್ಪಂದಿಸಿಲ್ಲ. ಈ ನಿಟ್ಟಿನಲ್ಲಿ ಕರೊನಾ ಸೋಂಕು ಹೆಚ್ಚಿರುವ 9 ಜಿಲ್ಲೆಗಳಲ್ಲಿ ಕರ್ಪ್ಯೂ ಮಾದರಿ ನಿರ್ಬಂಧ ಹೇರಲಾಗಿದೆ. ಹಾಲು, ಅಗತ್ಯವಸ್ತುಗಳ ಸೇವೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಡಾ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಸೇರಿ ಈಗಾಗಲೇ ಘೋಷಿಸಿರುವ ಒಂಭತ್ತು ಜಿಲ್ಲೆಗಳಲ್ಲಿ ಕರ್ಫ್ಯೂ ಮಾದರಿ ನಿಯಂತ್ರಣ ಜಾರಿಯಲ್ಲಿ ಇರಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕೂಡ ಸಂಚರಿಸುವುದಿಲ್ಲ. ಮುಖ್ಯಮಂತ್ರಿಯವರ ನೇತೃತ್ವದಲ್ಲಿ ವಾರ್ ರೂಮ್ ಒಂದು ಅಸ್ತಿತ್ವಕ್ಕೆ ಬರಲಿದ್ದು, ಬೆಂಗಳೂರಿನ ಬಾಲಬ್ರೂಯಿ ಅತಿಥಿ ಗೃಹದಿಂದ ಇದು ಕಾರ್ಯಾಚರಿಸಲಿದೆ. ಸಚಿವರ ಟಾಸ್ಕ್​ ಫೋರ್ಸ್​ಗೆ ನೆರವಾಗುವ ರೀತಿಯಲ್ಲಿ ಅಧಿಕಾರಿಗಳ ಸಮಿತಿಯ ರಚನೆ ಆಗಲಿದೆ. (ದಿಗ್ವಿಜಯ ನ್ಯೂಸ್)
ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಹವಣಿಸಿದರೆ ತಕ್ಕಶಾಸ್ತಿ ಖಂಡಿತ: ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + thirteen =
Remember me
