ರಾಮನಗರ:
ಕಾವೇರಿ ವಿಚಾರವಾಗಿ ವಿವಿಧ ಸಂಘಟನೆಗಳು ಶುಕ್ರವಾರ ಕರೆನೀಡಿರುವ ಕರ್ನಾಟಕ ಬಂದ್ ಗೆ ರಾಮನಗರ ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಬಂದ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳು ರಜೆ ಘೋಷಿಸಿವೆ. ಇದರ ಜೊತೆಗೆ ಜಿಲ್ಲಾಡಳಿತ ಸಹ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಿದೆ.
ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟದ ಜಿಲ್ಲಾಧ್ಯಕ್ಷ ಪಟೇಲ್ ಸಿ ರಾಜು ಪತ್ರಿಕೆಗೆ ಮಾಹಿತಿ ನೀಡಿದ್ದು, ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಶಾಲಾ ವಾಹನಗಳು, ಶಿಕ್ಷಕರು ಮತ್ತು ಮಕ್ಕಳ ಸುರಕ್ಷತೆಯ ಹಿತ ದೃಷ್ಟಿಯಿಂದ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಕಾವೇರಿ ನದಿ ನೀರು ನಮ್ಮದು, ನಮ್ಮ ಹಕ್ಕು ಎನ್ನುವ ಮನೋಭಾವನೆಯನ್ನು ವ್ಯಕ್ತಪಡಿಸುವುದು ಸಹ ನಮ್ಮ ಜವಾಬ್ದಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳು ಶುಕ್ರವಾರ ತಮ್ಮ ಶಾಲೆಗಳಿಗೆ ರಜೆ ಘೋಷಿಸಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಬೇಕು ಎಂದು ಈಗಾಗಲೇ ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಸರ್ಕಾರಿ ಶಾಲಾ‌ ಕಾಲೇಜುಗಳಿಗೂ ರಾಮನಗರ ಜಿಲ್ಲಾಢಳಿತ ರಜೆ ಘೋಷಣೆ ಮಾಡಿದೆ. ಈ ವಿಷಯವನ್ನು ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ ಧೃಢಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 − one =
Remember me
