ಬೆಂಗಳೂರು:ರೈತ ವಿರೋಧಿ ಮಸೂದೆ ಜಾರಿ ಖಂಡಿಸಿ ರಾಜ್ಯಾದ್ಯಂತ ಅನ್ನದಾತರ ಆಕ್ರೋಶ ಭುಗಿಲೆದ್ದಿದೆ. ರಾಜಧಾನಿಯಲ್ಲೂ ಸಹಸ್ರಾರು ಸಂಖ್ಯೆಯ ಹೋರಾಟಗಾರು ವಿವಿಧಡೆ ಹಲವು ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸುತ್ತಿದ್ದಾರೆ.
ಟೌನ್ ಹಾಲ್​ನಲ್ಲಿ ಐಕ್ಯ ಸಮಿತಿ ಹಾಗೂ ರೈತ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದು, ಟೌನ್‍ಹಾಲ್‍ನಿಂದ ಫ್ರೀಡಂ ಪಾರ್ಕ್​ವರೆಗೆ ರ‍್ಯಾಲಿ ಹೊರಟಿದ್ದಾರೆ. ಮೌರ್ಯ ಸರ್ಕಲ್​ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಾರಥ್ಯದ ರಾಜ್ಯ ರೈತ ಸಂಘ ಹಸಿರು ಸೇನೆ, ಮೆಜೆಸ್ಟಿಕ್‍ನಲ್ಲಿ ರೈಲು ತಡೆ- ನಾರಾಯಣಗೌಡ ನೇತೃತ್ವದ ಕರವೇ, ಸುಮ್ಮನಹಳ್ಳಿ ಸರ್ಕಲ್– ಗಿರೀಶ್ ಗೌಡ ನೇತೃತ್ವದ ರಾಜ್ಯ ರೈತ ಸಂಘಟನೆ, ಡಾ.ರಾಜಕುಮಾರ್ ಸಮಾಧಿ (ಲಗ್ಗರೆ ಜಂಕ್ಷನ್)– ಕರ್ನಾಟಕ ರಕ್ಷಣಾ ವೇದಿಕೆ, ಕೆಪಿಸಿಸಿ ಕಚೇರಿ– ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯುತ್ತಿದೆ.ಇದನ್ನೂ ಓದಿರಿರೈತ ಹೋರಾಟಗಾರರ ಫೋನ್ ಕದ್ದಾಲಿಕೆ! ಸರ್ಕಾರದ ವಿರುದ್ಧ ಕಿಡಿಕಾರಿದ ಮಾಜಿ ಸಚಿವ
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕರವೇ ಮಹಿಳಾ ಕಾರ್ಯಕರ್ತೆಯರು ಏರ್‌ಪೋರ್ಟಿಗೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಪೊಲೀಸರು 30ಕ್ಕೂ ಹೆಚ್ಚು ಮಹಿಳಾ ಪ್ರತಿಭಟನಾಕಾರರನ್ನ ಬಂಧಿಸಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕರವೇ ಕಾರ್ಯಕರ್ತರು ರೈಲ್ವೆ ಸ್ಟೇಷನ್ ಮುತ್ತಿಗೆಗೆ ಯತ್ನಿಸಿದಾಗ ಫ್ಲಾಟ್ ಫಾರಂಗೆ ಬಿಡದೆ ಎಲ್ಲ ಕರವೇ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಮೆಜೆಸ್ಟಿ‌ಕ್‌ನಲ್ಲಿ ಪೊಲೀಸರ ವಶಕ್ಕೊಳಗಾದ ಕರವೇ ಕಾರ್ಯಕರ್ತರು ಬಸ್ಸಿನಿಂದ ಕೆಳಗಿಳಿದು ಆನಂದ್ ರಾವ್ ಫ್ಲೈ ಓವರ್ ಮೇಲೆ ರಸ್ತೆ ತಡೆದು ಪ್ರತಿಭಟನೆಗೆ ಮುಂದಾಗಿದ್ದರು. ಮತ್ತೆ ಕಾರ್ಯಕರ್ತರನ್ನು ಬಸ್ಸಿಗೆ ಹತ್ತಿಸಿ ಪೊಲೀಸರು ಕಳುಹಿಸಿದ್ದಾರೆ. ಸದ್ಯ ಟೌನ್‌ಹಾಲ್‌ನಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುತ್ತಿದೆ. (ಇದಿಷ್ಟು ಮಧ್ಯಾಹ್ನ 12ರ ವರದಿ)
VIDEO| ಕರ್ನಾಟಕ ಬಂದ್​: ಹೆದ್ದಾರಿಯಲ್ಲಿ ರೈತರ ಡ್ಯಾನ್ಸ್, ಫುಲ್ ಟ್ರಾಫಿಕ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 7 =
Remember me
