ಬೆಂಗಳೂರು:ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22ರಂದು ರಾಜ್ಯಾದ್ಯಂತ ಬಂದ್​ಗೆ ಕರ್ನಾಟಕ ಚೇಂಬರ್ಸ್ ಆಫ್ ಕಾರ್ಮಸ್ ಅಂಡ್ ಇಂಡಸ್ಟ್ರಿ(KCC&I) ಕರೆ ನೀಡಿದೆ. 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್​ಗಳು ಬಂದ್​ಗೆ ಬೆಂಬಲ ಸೂಚಿಸಿವೆ.
ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಸರ್ಕಾರಕ್ಕೆ ಒಂದು ವಾರಗಳ ಗಡುವು ನೀಡಿತ್ತು. ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆಯನ್ನೂ ನೀಡಿತ್ತು.
ಇದನ್ನೂ ಓದಿ:ಅಂಗಡಿ ಮುಂದೆ ಕಾಡಾನೆ ಕಲಾಕೃತಿ ನಿರ್ಮಿಸಿದ ವ್ಯಾಪಾರಿ; ಇದಕ್ಕೆ ಕಾರಣ ಅದೊಂದು ನಂಬಿಕೆ!
ರಾಜ್ಯಾದ್ಯಂತ ಜೂನ್ 22 ರಂದು ಎಲ್ಲಾ ಕೈಗಾರಿಕೆಗಳು ಬಂದ್ ಆಗಲಿವೆ. ಕಳೆದ 8 ದಿನಗಳಿಂದ ವಿದ್ಯುತ್ ಶುಲ್ಕ ಹೆಚ್ಚಳದ ಪರಿಣಾಮದ ಗಂಭೀರತೆಯನ್ನು ಸರ್ಕಾರಕ್ಕೆ ತಿಳಿಸುವ ಪ್ರಯತ್ನ ಈಗಾಗಲೇ ಮಾಡಿದ್ದೇವೆ. ಆದರೆ, ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಅಸಹಜ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಬಂದ್​ಗೆ ಕರೆ ನೀಡಿದ್ದೇವೆ. ಈ ಮೂಲಕ ನಮ್ಮ ಮನವಿಗೆ ಸರ್ಕಾರ ಸ್ಪಂದಿಸುತ್ತದೆ ಎಂದು ಭಾವಿಸಿದ್ದೇವೆ ಎಂದು KCC&I ತಿಳಿಸಿದೆ.

ಗದಗ ಜಿಲ್ಲಾ ಚೇಂಬರ್. ಬಿಜಾಪುರ, ರಾಣೆಬೆನ್ನೂರು, ರಾಯಚೂರು, ತಾಳಿಕೋಟಿ, ವಿಜಯನಗರ, ಮೈಸೂರು, ದಾವಣಗೆರೆ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಶಿರಸಿ, ಕಾರವಾರ, ಬೀದರ್, ಶಿವಮೊಗ್ಗ, ಕೋಲಾರ, ಮಂಡ್ಯ, ಚಿಕ್ಕಮಗಳೂರು, ಯಾದಗಿರಿ, ಚಿತ್ರದುರ್ಗ, ಕಲ್ಯಾಣ ಕರ್ನಾಟಕ, ಹಾವೇರಿ, ಹಾಸನ ಹಾಗೂ ಬಳ್ಳಾರಿಯಲ್ಲಿ ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 15 =
Remember me
