ಬೆಂಗಳೂರು:ರಾಜ್ಯ ಸರ್ಕಾರ ಬಂದ್​ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕರ್ನಾಟಕ ಬಂದ್​ಗೆ ಸಹಕಾರವನ್ನು ನೀಡದೆ ಪೊಲೀಸರ ಮೂಲಕ ಹೋರಾಟಗಾರರನ್ನು ವಶಕ್ಕೆ ಪಡೆಯುತ್ತಿದೆ. ಗೂಂಡಾ ರಾಜ್ಯ ಮಾಡಲು ಹೊರಟಿದ್ದಾರೆ ಎಂದು ಕನ್ನಡ ಒಕ್ಕೂಟ ನಾಯಕ ವಾಟಾಳ್​ ನಾಗರಾಜ್​ ಅವರು ಸರ್ಕಾರ ವಿರುದ್ಧ ಆಕ್ರೋಶ ಹೊರಹಾಕಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಬಂದ್​ಗೆ ಸರ್ಕಾರದಿಂದ ವಿರೋಧ ಇದೆ. ಪೊಲೀಸರಿಗೆ ಒತ್ತಡ ಹಾಕಿದೆ. ಇದೀ ಕರ್ನಾಟಕ ಇದೀಗ ಪೊಲೀಸ್ ರಾಜ್ಯವಾಗಿದೆ. ಬೆಂಗಳೂರು ಒಂದಕ್ಕೆ‌ 50 ಸಾವಿರ ಪೊಲೀಸರನ್ನು ನಿಯೋಜಿಸಿದೆ. ಇಡೀ ಕರ್ನಾಟಕಕ್ಕೆ ಲಕ್ಷಾಂತರ ಪೊಲೀಸ್ ಹಾಕಿ ಸರ್ಕಾರವೇ ಬಂದ್​ ಮಾಡುತ್ತಿದೆ. ನಾವು ಕಾವೇರಿ ಹೋರಾಟಕ್ಕೆ ಬಂದ್ ಮಾಡಿದ್ರೆ, ಸರ್ಕಾರ ಪೊಲೀಸ್ ಹಾಕಿ ಬಂದ್ ಮಾಡ್ತಿದೆ ಎಂದು ಅಸಮಾಧಾನ ಹೊರಹಾಕಿದರು.
ಇದೇ ಸಂದರ್ಭದಲ್ಲಿ ಬುರ್ಖಾ ಧರಿಸಿ, ಖಾಲಿ ಕೊಡ ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾದ ವಾಟಾಳ್​ ನಾಗರಾಜ್​, ಮಹಿಳೆಯರ ಪರವಾಗಿ, ನ್ಯಾಯ, ಸತ್ಯದ ಪರವಾಗಿ ಒತ್ತಾಯಿಸಿ ಖಾಲಿ ಕೊಡ ಕೈಯಲ್ಲಿ ಹಿಡಿದು ಕಾವೇರಿಗಾಗಿ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:ಕರ್ನಾಟಕ ಬಂದ್; ಶೂಟಿಂಗ್ ನಿಲ್ಲಿಸಿ, ಪ್ರತಿಭಟನೆಯಲ್ಲಿ ಭಾಗಿಯಾದ ನಟ ‘ಒರಟ’ ಪ್ರಶಾಂತ್​
ಸರ್ಕಾರ ಏನೇ ಮಾಡಿದರು ನಾವು ಕರೆಕೊಟ್ಟ ಬಂದ್ ಇಡೀ ರಾಜ್ಯಾದ್ಯಂತ ಯಶಸ್ವಿ ಕಂಡಿದೆ. ಇಡೀ ನಾಡಿನ ಜನತೆಯನ್ನು ಈ ಮೂಲಕ ಅಭಿನಂದಿಸುತ್ತೇನೆ. ಅಖಂಡ ಕರ್ನಾಟಕ ಹೆಸರನ್ನು ಕನ್ನಡಿಗರು ಉಳಿಸಿ, ಗೌರವ ತಂದಿದ್ದಾರೆ. ಆದರೆ, ಸರ್ಕಾರ ಅರ್ಥ ಮಾಡಿಕೊಳ್ಳಲಿಲ್ಲ. ಎಲ್ಲೆಂದರಲ್ಲಿ ಬಂಧನ ಮಾಡ್ತಿದ್ದಾರೆ ಮತ್ತು ಎಲ್ಲಂದರಲ್ಲಿ ಹಿಡಿಯುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಕಾವೇರಿ ನೀರು ಬಿಡಬಾರದು. ನಮ್ಮ ಅನೇಕ ಸಂಘಟನೆಗಳು ಸಮುದಾಯ ಹೋರಾಟದ ಹಿನ್ನೆಲೆ ಇರೋರು ಹೋರಾಟ ಮಾಡ್ತಿದ್ದಾರೆ. ಪ್ರವೀಣ್ ಶೆಟ್ಟಿ ಅವರನ್ನೂ ಬಂಧನ ಮಾಡಿದ್ದಾರೆ. ಮೆರವಣಿಗೆಯನ್ನು ತಡೆದಿದ್ದಾರೆ. ಎಲ್ಲೆಡೆ 144 ಸೆಕ್ಷನ್ ಹಾಕಿದ್ದಾರೆ. ನಮ್ಮ ರಾಜ್ಯವನ್ನು ಪೊಲೀಸ್ ರಾಜ್ಯ ಮಾಡಿರೋದು ಸರಿಯಲ್ಲ. ಗೂಂಡಾ ರಾಜ್ಯ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.
ಟೌನ್​ಹಾಲ್​ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವಾಟಾಳ್​ ನಾಗರಾಜ್​ ಅವರನ್ನು ಪೊಲೀಸರು ವಶಕ್ಕೆ ಪಡೆದು ಫ್ರೀಡಂ ಪಾರ್ಕ್​ಗೆ ಕರೆದೊಯ್ದುರು. ಫ್ರೀಡಂ ಪಾರ್ಕ್​ನಲ್ಲೇ ವಾಟಾಳ್​ ನಾಗರಾಜ್​ ಅವರು ಪ್ರತಿಭಟನೆ ಮಾಡಲಿದ್ದಾರೆ. ಈಗಾಗಲೇ ಕನ್ನಡ ಹೋರಾಟಗಾರ ಪ್ರವೀಣ್​ ಶೆಟ್ಟಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
‘ಭಾರತದೊಂದಿಗೆ ಉತ್ತಮ ಬಾಂಧವ್ಯ ಬೆಸೆಯಲು ಸದಾ ಬದ್ಧ’: ಭಾರತದ ಕಠಿಣ ನಿಲುವಿನ ನಂತರ ಮೃದುವಾದ ಟ್ರೂಡೊ ವರ್ತನೆ

ಕರ್ನಾಟಕ ಬಂದ್; ಶೂಟಿಂಗ್ ನಿಲ್ಲಿಸಿ, ಪ್ರತಿಭಟನೆಯಲ್ಲಿ ಭಾಗಿಯಾದ ನಟ ‘ಒರಟ’ ಪ್ರಶಾಂತ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − six =
Remember me
