ಮಂಗಳೂರು:ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತ ಕೃಷ್ಣ (74) ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಮುಂಜಾನೆ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಪುತ್ರ, ಬಂಧುವರ್ಗದವರನ್ನು ಅಗಲಿದ್ದಾರೆ.
1946ರ ಅ.27ರಂದು ಬಂಟ್ವಾಳ ಮೂಡಸಜಿಪದ ಕಂಚಿನಡ್ಕಪದವಿನಲ್ಲಿ ಜನಿಸಿ, ಮಂಗಳೂರಿನಲ್ಲಿ ಪ್ರಾಥಮಿಕ, ಬಂಟ್ವಾಳದಲ್ಲಿ ಪ್ರೌಢ, ಮಂಗಳೂರಿನಲ್ಲಿ ಪಿಯು ಮತ್ತು ಪದವಿ ಶಿಕ್ಷಣ, ಮೈಸೂರು ವಿವಿ ಮಂಗಳೂರು ಕೇಂದ್ರದಲ್ಲಿ ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದರು. ಮೊಡಂಕಾಪು ದೀಪಿಕಾ ಹೈಸ್ಕೂಲ್​ನಲ್ಲಿ ಅಧ್ಯಾಪಕನಾಗಿ ವೃತ್ತಿ ಜೀವನ ಆರಂಭಿಸಿದ ಅನಂತಕೃಷ್ಣ, 1971ರಲ್ಲಿ ಕರ್ಣಾಟಕ ಬ್ಯಾಂಕ್​ನಲ್ಲಿ ಅಧಿಕಾರಿ ಹುದ್ದೆಗೆ ಆಯ್ಕೆಯಾದರು. 1994ರಲ್ಲಿ ಜನರಲ್ ಮ್ಯಾನೇಜರ್, 1998ರಲ್ಲಿ ಚೀಫ್ ಜನರಲ್ ಮ್ಯಾನೇಜರ್ ಹಾಗೂ 2000ರಲ್ಲಿ ಅಧ್ಯಕ್ಷರಾದರು. 2009ರಿಂದ 2016ರವರೆಗೆ ನಾನ್ ಎಕ್ಸಿಕ್ಯುಟಿವ್ ಚೇರ್ಮನ್ ಆಗಿದ್ದರು. ಅನಂತಕೃಷ್ಣ ಆಡಳಿತಾವಧಿಯಲ್ಲಿ ಬ್ಯಾಂಕ್ ಇತಿಹಾಸದಲ್ಲಿಯೇ ಉನ್ನತ ಸ್ತರಕ್ಕೇರಿತು. ಸದಾಕಾಲ ಮಾರ್ಗದರ್ಶಕರಾಗಿದ್ದ ಅವರ ಅಗಲಿಕೆ ಕರ್ಣಾಟಕ ಬ್ಯಾಂಕಿನ ಸಮಸ್ತ ಪರಿವಾರಕ್ಕೆ ಅಪಾರ ದುಃಖ ಉಂಟುಮಾಡಿದೆ ಎಂದು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಚೀಫ್ ಎಕ್ಸಿಕ್ಯುಟಿವ್ ಆಫೀಸರ್ ಮಹಾಬಲೇಶ್ವರ ಎಂ.ಎಸ್.ಸಂತಾಪ ವ್ಯಕ್ತಪಡಿಸಿದ್ದಾರೆ.
ಕರೊನಾ ಬುಲೆಟಿನ್​: ಸೋಂಕಿತರಿಗಿಂತ ಗುಣವಾದವರೇ ಅಧಿಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
