ಬೆಂಗಳೂರು:ಸರ್ಕಾರಕ್ಕೆ ಶತ ದಿನ, ಇತ್ತ ಬಿಜೆಪಿ ನಾಯಕರು ಖಾಸಗಿ ಹೊಟೇಲಿನಲ್ಲಿ ಸುದ್ದಿಗೋಷ್ಠಿ ನಡೆದಿದ್ದು, ಕಾಂಗ್ರೆಸ್ ಸರ್ಕಾರದ 100 ದಿನಗಳ ವೈಫಲ್ಯಗಳ‌ ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ.
ಮಾಜಿ ಸಿಎಂ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್ ಜಂಟಿ ಸುದ್ದಿಗೋಷ್ಠಿ ನಡೆದಿದ್ದು. ಮಾಜಿ ಸಚಿವ ಗೋವಿಂದ ಕಾರಜೋಳ, ಮಾಜಿ ಪರಿಷತ್ ಸದಸ್ಯ ಅಶ್ವಥ್ ನಾರಾಯಣ ಸಾಥ್ ನೀಡಿದ್ದಾರೆ.
ಸರ್ಕಾರದ ನೂರು ದಿನಗಳ ಲೋಪದೋಷಗಳ ಚಾರ್ಜ್‍ಶೀಟ್ ಬಿಡುಗಡೆ ಮಾಡಿದ್ದಾರೆ. ಸರ್ಕಾರದ ವಿರುದ್ಧ ಹಲವು ಆರೋಪಗಳಿರುವ ಕಿರು ಹೊತ್ತಿಗೆ ಬಿಡುಗಡೆ ಮಾಡಿದ ಬಿಜೆಪಿ ನಾಯಕರು ‘ಕೈಕೊಟ್ಟ ಯೋಜನೆಗಳು – ಹಳಿತಪ್ಪಿದ ಆಡಳಿತ’ ಹೆಸರಿನ ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ.
ಕೇವಲ ಮಾಧ್ಯಮ ವರದಿಗಳನ್ನೇ ಮುದ್ರಿಸಿ ಪುಸ್ತಕದ ರೂಪದಲ್ಲಿ ಬಿಡುಗಡೆ ಮಾಡಲಾಗಿದ್ದು, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿನ ಆರೋಪಗಳು ಸೇರಿದಂತೆ ವರ್ಗಾವಣೆ ದಂಧೆ, ಶಾಸಕರು-ಸಚಿವರ ನಡುವಿನ ಹಗ್ಗಜಗ್ಗಾಟ ಸೇರಿದಂತೆ ಇತರೆ ವಿಷಯನ್ನೊಳಗೊಂಡಿದೆ.
ನಳಿನ್ ಕುಮಾರ್ ಕಟೀಲ್ ಮಾತನಾಡಿ, ಅಧಿಕಾರಕ್ಕೆ ಬಂದ ನಂತರ ಈ ಸರ್ಕಾರ ರಾಜ್ಯದ ಜನತೆಗೆ ಮೋಸ ಮಾಡಿದೆ. ಸರ್ಕಾರ ನೂರು ದಿನಗಳಲ್ಲಿ ನೂರಾರು ತಪ್ಪು ಮಾಡಿದೆ. ಗ್ಯಾರಂಟಿಗಳಿಗೆ ಷರತ್ತುಗಳನ್ನು ಹಾಕಿ ಸರ್ಕಾರ ಮಾತು ತಪ್ಪಿದೆ. ಇಬ್ಬರು ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದರೂ ಅವರ ರಾಜೀನಾಮೆ ಪಡೆದಿಲ್ಲ. ನಮ್ಮ ಕಾಲದಲ್ಲಿ ಬಂಡವಾಳ ಹೂಡಿಕೆ ಹರಿದು ಬಂದಿತ್ತು. ಈಗ ಹೂಡಿಕೆದಾರರು ಬಂಡವಾಳ ವಾಪಸ್ ತಗೋತಿದಾರೆ. ಹಲವು ಹೂಡಿಕೆದಾರರು ವಿದ್ಯುತ್ ಅಭಾವದಿಂದ ರಾಜ್ಯ ತ್ಯಜಿಸ್ತಿದಾರೆ. ರಾಜ್ಯದಲ್ಲಿ ಬರ, ಮಳೆ ಅಭಾವ ಪರಿಣಾಮ ವಿದ್ಯುತ್ ಕಡಿತ, ಬಜೆಟ್ ನಲ್ಲಿ ರೈತಪರ ಯೋಜನೆ ಘೋಷಣೆ ಮಾಡಿಲ್ಲ. ರೈತ ಕಿಸಾನ್ ಯೋಜನೆಯಡಿ ರೈತರಿಗೆ ನಾಲ್ಕು ಸಾವಿರ ಕೊಡೋದನ್ನು ನಿಲ್ಲಿಸಿದೆ, ರೈತ ವಿದ್ಯಾನಿಧಿ ಯೋಜನೆ ನಿಲ್ಲಿಸಿದೆ.
ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಸರ್ಕಾರ ದ್ವೇಷದ ರಾಜಕಾರಣ ನಡೆಸ್ತಿದೆನಾವು ತಂದ ಕಾಯ್ದೆಗಳು, ಯೋಜನೆಗಳನ್ನು ನಿಲ್ಲಿಸಲಾಗಿದೆ. ನಮ್ಮ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಹಾಕಲಾಗ್ತಿದೆ. ರಾಜ್ಯದಲ್ಲಿ ಈ ಹಿಂದಿನ ತುರ್ತು ಪರಿಸ್ಥಿತಿ ಹೇರಲಾಗುತ್ತಿದೆ ಎಂದು ಸಾಲು ಸಾಲು ಆರೋಪ ಮಾಡಿದ್ದಾರೆ.
ಬೊಮ್ಮಾಯಿ ಮಾತನಾಡಿ, ಸಂಪೂರ್ಣ ಬಹುಮತ ಪಡೆದ ಸರ್ಕಾರ ಮುಂದಿನ ಐದು ವರ್ಷದ ಆಡಳಿತದ ದಿಕ್ಸೂಚಿ ಹೇಳದೇ ದಿಕ್ಕುತಪ್ಪಿದ ಸರ್ಕಾರ ಆಗಿದೆ. ಹಲವು ವಿಚಾರಗಳಲ್ಲಿ ವಿಫಲ, ಬಹಳ ವಿಚಾರಗಳಲ್ಲಿ ಗೊಂದಲಕ್ಕೆ ಸರ್ಕಾರ ಸಿಕ್ಕಿದೆ. ಜನರಿಗೆ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಹಣಕಾಸು ವ್ಯವಸ್ಥೆ ಹಳಿ ತಪ್ಪಿದೆ. ನಾವು ಉಳಿತಾಯ ಬಜೆಟ್ ಮಂಡಿಸಿದ್ದೆವು, ಇವರು ಕೊರತೆ ಬಜೆಟ್ ಮಂಡಿಸಿದ್ದಾರೆಹಲವು ತೆರಿಗೆಗಳನ್ನು ಹೆಚ್ಚಿಸಿದ್ದಾರೆ ಎಂದಿದ್ದಾರೆ.
8 ಸಾವಿರ ಕೋಟಿ ರೂ. ಸಾಲ ಮಾಡಿದ್ದಾರೆ, ಎಲ್ಲಾ ತೆರಿಗೆ ಹೆಚ್ಚಿಸಿದ್ದಾರೆ. ಸಾಲ ಮತ್ತು ತೆರಿಗೆ ಮೂಲಕ 45 ಸಾವಿರ ಕೋಟಿ ಆದಾಯ ಇದ್ದರೂ 12 ಸಾವಿರ ಕೋಟಿ ರೂ. ಖೋತಾ ಬಜೆಟ್ ಮಂಡಿಸಿದ್ದಾರೆ. ಹಲವಾರು ಸಂಘ ಮತ್ತು ಸಂಸ್ಥೆಗಳ ಸಂಬಳ ಸರಿಯಾಗಿ ಆಗುತ್ತಿಲ್ಲ. ರಾಜ್ಯದಲ್ಲಿ 1 ಕಿ.ಮೀ. ರಸ್ತೆ ಕೂಡ ಕಾಂಗ್ರೆಸ್ ನಿರ್ಮಾಣ ಮಾಡಿಲ್ಲ. ಕೃಷಿ ಸೇರಿ ಹಲವು ಇಲಾಖೆಯಲ್ಲಿ ವರ್ಗಾವಣೆಯ ಸುಗ್ಗಿ ನಡೆದಿದೆ ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
