ಬೆಂಗಳೂರು:ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಭರವಸೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದಾರೆ. ಗ್ಯಾರಂಟಿ ಯೋಜನೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್​ ಟ್ವೀಟರ್ ಮೂಲಕ ಬಿಜೆಪಿ ನಾಯಕರನ್ನು ಉಲ್ಲೇಖಿಸಿ ವ್ಯಂಗ್ಯವಾಡಿತ್ತು.
ಇದೀಗ ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ. ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿರುವ ನಿರುದ್ಯೋಗ ಭತ್ಯೆಯನ್ನು ಪಧವೀಧರರಾಗಿದ್ದರೆ ರಾಹುಲ್ ಗಾಂಧಿ ಹಾಗೂ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೂ ದಯಪಾಲಿಸಿ ಎಂದು ರಾಜ್ಯ ಬಿಜೆಪಿ ಹೇಳಿದೆ.
ಖಂಡಿತಾ ಸ್ವಾಮಿ….
ಹಾಗೆಯೇ ನಿರುದ್ಯೋಗ ಭತ್ಯೆಯನ್ನು ಶ್ರೀ@RahulGandhiಯವರಿಗೂ (ಪದವೀಧರರಾಗಿದ್ದರೆ ಮಾತ್ರ) ಹಾಗೂ ಡಾ|| ಯತೀಂದ್ರ ಸಿದ್ದರಾಮಯ್ಯನವರಿಗೂ ದಯಪಾಲಿಸಿ.https://t.co/Nl7qS356ft
— BJP Karnataka (@BJP4Karnataka)June 2, 2023
ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಆರಂಭದಿಂದಲೂ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದರು. ಹೀಗಾಗಿ ಸಿದ್ದರಾಮಯ್ಯ ಯೋಜನೆಗಳನ್ನು ಘೋಷಿಸುತ್ತಿದ್ದಂತೆ, ಬಸವರಾಜ ಬೊಮ್ಮಾಯಿ ಹಾಗೂ ನಳಿನ್ ಕುಮಾರ್ ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ ಎಂದು ಟ್ವೀಟ್ ಮಾಡಿ ಕಾಂಗ್ರೆಸ್ ಟಾಂಗ್ ಕೊಟ್ಟಿತ್ತು.
ಜತೆಗೆ ಶೋಭಾ ಕರಂದ್ಲಾಜೆ ಅವರನ್ನು ಟ್ಯಾಗ್ ಮಾಡಿ ನಿಮಗೂ ಪ್ರಯಾಣ ಫ್ರೀ! ಸಿ.ಟಿ. ರವಿ ಅವರೇ, ನಿಮ್ಮ ಮನೆಯವರಿ 2000 ರೂ. ಫ್ರೀ. ಅಲ್ಲದೆ ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಹೇಳಿಕೊಂಡಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − twelve =
Remember me
