ಬೆಂಗಳೂರು:ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆಲವೇ ದಿನಗಳಲ್ಲಿ ಕಾಂಗ್ರೆಸ್​ನ ನಿಜವಾದ ಮುಖ ಬಯಲಾಗಿದೆ ಎಂದು ಶಿಕಾರಿಪುರದ ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್​ ಮೂಲಕ ಕಾಂಗ್ರೆಸ್​ ವಿರುದ್ಧ ವಿಜಯೇಂದ್ರ ಟೀಕಾ ಪ್ರಹಾರ ನಡೆಸಿದ್ದಾರೆ. ಅಧಿಕಾರದ ಲಾಭಕ್ಕಾಗಿ ಲಿಂಗಾಯತ ಹೆಸರನ್ನು ಪಾದಪೀಠವಾಗಿಸಿಕೊಂಡ ಕಾಂಗ್ರೆಸ್​ನ ಧೀಮಂತ ನಾಯಕರು ಲಿಂಗಾಯತರಿಗೆ ಸಿಎಂ ಅಥವಾ ಡಿಸಿಎಂ ನೀಡಿ ಎಂಬ ಮಾತು ಕೇಳಿಬಂದಾಗ ಮೌನವಾಗಿದ್ದಾರೆ.
ಇದನ್ನೂ ಓದಿ:ಕಡಿಮೆ ಬೆಲೆಗೆ ಸಿಕ್ತು ಅಂತ ಮೊಬೈಲ್​ ಖರೀದಿಸಿದ್ರೆ ಸಂಕಟ ಗ್ಯಾರಂಟಿ! ಮಂಡ್ಯ ಪೊಲೀಸರಿಂದ ಎಚ್ಚರಿಕೆ
After using Lingayats as Pedestal for its greed of power,Stalwarts of Congress hv suddenly gone silent whn it comes to offering CM or even DCM
Ironically,evn aftr winning a max of 39 MLAs frm Congrs,Lingayats finds itself without any strong Voice to Demand Rightful Positions.1/3
— Vijayendra Yediyurappa (@BYVijayendra)May 19, 2023

39 ಲಿಂಗಾಯತ ಶಾಸಕರು ಆಯ್ಕೆಯಾಗಿದ್ದರು ಯಾವೊಬ್ಬ ಲಿಂಗಾಯತ ನಾಯಕನೂ ಕೂಡ ಸರಿಯಾದ ಸ್ಥಾನಕ್ಕಾಗಿ ತಮ್ಮ ಧ್ವನಿ ಎತ್ತದಿರುವುದು ವಿಪರ್ಯಾವಾಗಿದೆ. ಕಾಂಗ್ರೆಸ್​ನ ಅಸಲಿ ಮುಖ ಬಯಲಾಗಿದೆ. ಲಿಂಗಾಯತ ಸಮುದಾಯವನ್ನು ಕಾಂಗ್ರೆಸ್​ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಇದೇ ಮೊದಲೇನಲ್ಲ. ಹಿಂದಿನಿಂದಲೂ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್​ ನ್ಯಾಯ ಒದಿಗಿಸಿಲ್ಲ ಎಂದು ಕಾಂಗ್ರೆಸ್​ ವಿರುದ್ಧ ವಿಜಯೇಂದ್ರ ಹರಿಹಾಯ್ದಿದ್ದಾರೆ.
ಅಣ್ಣ ಬಸವಣ್ಣ ಮತ್ತು ಅವರ ಬೋಧನೆಗಳನ್ನು ನಿಜವಾಗಿಯೂ ಪ್ರತಿನಿಧಿಸುವುದು ಬಿಜೆಪಿ ಮಾತ್ರ. ಬಸವಣ್ಣನವರ ತತ್ವವನ್ನು ಅನುಸರಿಸುವ ಮೂಲಕ ಎಲ್ಲರಿಗೂ ನ್ಯಾಯವನ್ನು ಒದಗಿಸುತ್ತಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಭೀಕರ ಅಪಘಾತ; ಬಿಜೆಪಿಯ ಮಾಜಿ ಸಚಿವ ವಿಧಿವಶ

ಪಿಯು ಮರು ಮೌಲ್ಯಮಾಪನ: ತಬಸುಮ್​ ಹಿಂದಿಕ್ಕಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಶು ನಾಯ್ಕ್!

ವಿಶ್ವದ ಅತ್ಯಂತ ದುಬಾರಿ ಐಸ್ ಕ್ರೀಮ್ ಯಾವುದು ಗೊತ್ತಾ? ಲಕ್ಷಾಂತರ ರೂ. ಬೆಲೆ ಬಾಳುತ್ತೆ ಈ ಐಸ್​ ಕ್ರೀಮ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 1 =
Remember me
