ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿರುವ ಈ ಸಲದ ರಾಜ್ಯ ಬಜೆಟ್​ನಲ್ಲಿ ಆರೋಗ್ಯ ಸೇವಾ ಕ್ಷೇತ್ರಕ್ಕೂ ಪ್ರಾಧಾನ್ಯತೆ ಸಿಕ್ಕಿದ್ದು, ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಲಾಗಿದೆ.
ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ / ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಂತ ಹಂತವಾಗಿ 19 ಕೋಟಿ ರೂ. ವೆಚ್ಚದಲ್ಲಿ ಟೆಲಿಮೆಡಿಸನ್ ಸೇವೆಯನ್ನು ವಿಸ್ತರಿಸುವುದಾಗಿ ಹೇಳಿದ ಸಿಎಂ ಬಿಎಸ್​ ಯಡಿಯೂರಪ್ಪ ಅವರು, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿರುವುದಾಗಿ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ 200 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸುವ ಯೋಜನೆ ಘೋಷಿಸಿದ ಸರ್ಕಾರ, ಆರು ವರ್ಷದೊಳಗಿನ ಮಕ್ಕಳಲ್ಲಿ ಜನ್ಮಜಾತ ಕಿವುಡುತನ ಪತ್ತೆ ಹಚ್ಚಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರ ಚಿಕಿತ್ಸೆ ನಡೆಸಿ, ಶ್ರವಣಯಂತ್ರ ಒದಗಿಸಿ ಗುಣಪಡಿಸುವ ಯೋಜನೆಗೆ 28 ಕೋಟಿ ರೂ. ಅನುದಾನವನ್ನೂ ಘೋಷಿಸಿದೆ.
ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಪ್ರಾಯೋಗಿಕವಾಗಿ ಎರಡು ಜಿಲ್ಲೆಗಳಲ್ಲಿ ತಾಲ್ಲೂಕು ಆಸ್ಪತ್ರೆಗಳ ತೀವ್ರ ನಿಗಾ ಘಟಕ ನಿರ್ವಹಣೆ ವಿಚಾರ ಪ್ರಕಟಿಸಿರುವ ರಾಜ್ಯ ಸರ್ಕಾರ, ರಾಜ್ಯದ ಆಯ್ದ ಐದು ಜಿಲ್ಲೆಗಳಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಬಡ ರೋಗಿಗಳಿಗೆ ಉಚಿತ ಪೆರಿಟೋನಿಯಲ್ ಡಯಾಲಿಸಿಸ್ ಸೇವೆ ಒದಗಿಸುವುದಾಗಿ ಭರವಸೆ ನೀಡಿದೆ.
ಇದೇ ರೀತಿ, ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಇತರೆ ಐದು ಆಸ್ಪತ್ರೆಗಳ ತುರ್ತು ವೈದ್ಯಕೀಯ ಚಿಕಿತ್ಸಾ ವಿಭಾಗಗಳನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಿ ಉತ್ಕೃಷ್ಟತಾ ಕೇಂದ್ರಗಳನ್ನಾಗಿ (Centre of Excellence) ಅಭಿವೃದ್ಧಿಪಡಿಸಲು ಐದು ಕೋಟಿ ರೂಪಾಯಿ ಅನುದಾನ ಘೋಷಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಸಿ.ವಿ. ರಾಮನ್ ಆಸ್ಪತ್ರೆಗಳಲ್ಲಿ ಹೃದಯ ರೋಗದ ಚಿಕಿತ್ಸೆಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದೊಂದಿಗೆ ಕ್ಯಾತ್‍ಲ್ಯಾಬ್ ಸ್ಥಾಪನೆ ಮಾಡುವುದಾಗಿಯೂ ಪ್ರಕಟಿಸಿದರು. ಹಾಗೆಯೇ, ಹಾವೇರಿ ಜಿಲ್ಲೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 20 ಹಾಸಿಗೆಗಳ ಆಯುಷ್ ಸಂಯುಕ್ತ ಆಸ್ಪತ್ರೆ ಪ್ರಾರಂಭ. ಐದು ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 2 =
Remember me
