ಬೆಂಗಳೂರು:‘ಆಪರೇಷನ್ ಕಮಲ’ ಎಂಬ ಅನೈತಿಕ ರಾಜಕೀಯ ಮೂಲಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ರಾಜ್ಯವನ್ನು ದಶಕಗಳ ಹಿಂದಕ್ಕೆ ಒಯ್ಯುವ “ಆಪರೇಷನ್ ಬರ್ಬಾದ್” ಕಾರ್ಯಕ್ರಮವನ್ನು ಯಶಸ್ವಿಯಾಗಿ ಮಾಡುತ್ತಿದೆ. ಇದಕ್ಕೆ ಕಳೆದ ಮತ್ತು ಈ ವರ್ಷದ ಎರಡು ಬಜೆಟ್‍ಗಳೇ ಸಾಕ್ಷಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಬಜೆಟ್‍ನಲ್ಲಿ ಸರ್ಕಾರ ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು. ಆಯವ್ಯಯವನ್ನು ಇಲಾಖಾವಾರು ನೀಡದೆ ಆರು ವಲಯಗಳಾಗಿ ವಿಂಗಡಿಸಿ ಯಾವ ಇಲಾಖೆಗೆ ಎಷ್ಟು ಅನುದಾನ ನೀಡಲಾಗಿದೆ. ಇಲಾಖೆಗಳ ಕಾರ್ಯಕ್ರಮಗಳೇನು, ಕಳೆದ ವರ್ಷದ ಸಾಧನೆಗಳೇನು, ಹೊಸ ಯೋಜನೆಗಳೇನು ಎಂಬ ವಿವರಗಳೇ ಇಲ್ಲ. ಯಡಿಯೂರಪ್ಪನವರು ರಾಜ್ಯದ ಬಜೆಟ್‍ಗೆ ಇದ್ದ ಮಹತ್ವ ಮತ್ತು ಪಾವಿತ್ರ್ಯವನ್ನೇ ಹಾಳು ಮಾಡಿದ್ದಾರೆ. ರಾಜ್ಯದಲ್ಲಿರುವ 33 ಇಲಾಖೆಗಳನ್ನು ಆರು ವಲಯಗಳನ್ನಾಗಿ ಮಾಡಿ ಗೊಂದಲ ಸೃಷ್ಟಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:8ನೇ ಬಾರಿ ಬಜೆಟ್​ ಮಂಡನೆ: ಬಸವಳಿಯದ ಬಿಎಸ್‌ವೈ
ಸಂಕಷ್ಟಗಳ ಸರಮಾಲೆಗೆ ಸಿಲುಕಿರುವ ರೈತರು ದೇಶಾದ್ಯಂತ ಬೀದಿಗಿಳಿದಿದ್ದಾರೆ. ಕೃಷಿ ವಿರೋಧಿ ಕಾಯ್ದೆಗಳ ಮೂಲಕ ರೈತರನ್ನು ದಿವಾಳಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಜೊತೆ ಸೇರಿರುವ ರಾಜ್ಯ ಸರ್ಕಾರ ತನ್ನ ಬಜೆಟ್‍ನಲ್ಲೂ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ. ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲೂ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ‘ಒಂದು ಲಕ್ಷದವರೆಗಿನ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್‍ಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡುತ್ತೇವೆ’ ಎಂದು ಭರವಸೆ ನೀಡಿತ್ತು. ಈ ಸರಕಾರ ಅಧಿಕಾರಕ್ಕೆ ಬಂದ ನಂತರ ಮಂಡಿಸಿದ ಎರಡೂ ಬಜೆಟ್‍ಗಳಲ್ಲೂ ರೈತರ ಸಾಲ ಮನ್ನಾದ ಪ್ರಸ್ತಾಪವೇ ಇಲ್ಲ ಎಂದು ಕಿಡಿಕಾರಿದ್ದಾರೆ.
ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮಾಜದ ಅಭಿವೃದ್ಧಿಗಾಗಿ ನಿಗಮವನ್ನು ಸ್ಥಾಪಿಸಿ ತಲಾ 500 ಕೋಟಿ ಅನುದಾನ ನಿಗದಿಪಡಿಸಿರುವುದನ್ನೂ ನಾನು ಸ್ವಾಗತಿಸುತ್ತೇನೆ. ಆದರೆ, ಅಂಬೇಡ್ಕರ್, ವಾಲ್ಮೀಕಿ, ಆದಿಜಾಂಬವ, ಬೋವಿ, ವಿಶ್ವಕರ್ಮ, ಕಾಡುಗೊಲ್ಲರ, ಅಂಬಿಗರ ಚೌಡಯ್ಯ, ಸವಿತಾ ಸಮಾಜ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಒಟ್ಟು ಕೇವಲ 500 ಕೋಟಿ ಅನುದಾನ ನೀಡುವ ಮೂಲಕ ತಳಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ. ಈ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯದ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.
ಅವರ ತಲೆ; ನೈತಿಕತೆ ಅಂತೆ ನೈತಿಕತೆ… ಯಡಿಯೂರಪ್ಪ ಗರಂ

ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಯಡಿಯೂರಪ್ಪ: ಬಂಪರ್ ಗಿಪ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
