ಬೆಂಗಳೂರು:ಬೆಂಗಳೂರು ಸೇರಿದಂತೆ 11 ನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಈ ನಗರಗಳಲ್ಲಿ ರಾತ್ರಿ 11 ಗಂಟೆಯವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡುವುದಾಗಿ ಬಜೆಟ್​​​​ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಾಣಿಜ್ಯ ಮತ್ತು ವ್ಯಾಪಾರದ ಹಿತದೃಷ್ಟಿಯಿಂದ ರಾತ್ರಿಯ ವೇಳೆ ವ್ಯಾಪಾರ ವಹಿವಾಟಿನ ಸಮಯವನ್ನು ಹೆಚ್ಚಿಸಲಾಗಿದ್ದು, ಬೆಳಗಿನ ಜಾವ 1:00 ಗಂಟೆಯವರೆಗೆ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಯಾವ್ಯಾವ ನಗರಗಳು?ಬಿಬಿಎಂಪಿ ಸೇರಿ ರಾಜ್ಯದಲ್ಲಿ ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ತುಮಕೂರು, ವಿಜಯಪುರ ಮಹಾನಗರಪಾಲಿಕೆಗಳಿದ್ದು, ಈ ಎಲ್ಲಾ ಮಹಾನಗರ ವ್ಯಾಪ್ತಿಗಳಲ್ಲಿ ಇನ್ನೂ ಮುಂದೆ ರಾತ್ರಿ 1:00 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಯಲಿದೆ.
ಬಡಜನರಿಗೆ ಉಚಿತ ಪ್ರಯೋಗಾಲಯಬೆಂಗಳೂರಿನ ಬಡಜನರಿಗೆ ಉಚಿತ ಪ್ರಯೋಗಾಲಯ ಸೇವೆ ಒದಗಿಸಲಾಗುವುದು. ಇದಕ್ಕೆ 430 ಪ್ರಯೋಗಾಲಯಗಳ ಸ್ಥಾಪನೆಗೆ 20 ಕೋಟಿ ಮೀಸಲು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​​​​ನಲ್ಲಿ ಘೋಷಣೆ ಮಾಡಿದರು. ವೈದ್ಯಕೀಯ ಕಾಲೇಜುಗಳ ನಿರ್ಮಾಣ, ಉಪಕರಣ ಖರೀದಿಗೆ 400 ಕೋಟಿ ಅನುದಾನ ನೀಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
Karnataka Budget: 2 ಸಾವಿರ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:fifteen − 14 =
Remember me
