ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10:15ಕ್ಕೆ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ. ಇದು ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಆಗಿದ್ದು, ಲೋಕಸಭೆ ಚುನಾವಣೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ.
ಬಜೆಟ್​ನಲ್ಲಿ ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಆ ಮೂಲಕ ಆದಾಯ ಕ್ರೋಢೀಕರಣಕ್ಕೆ ಸಿದ್ದರಾಮಯ್ಯ ಕ್ರಮಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ರಾಜ್ಯದಲ್ಲಿ ಹಲವು ಬಾರಿ ಮದ್ಯದ ದರ ಏರಿಕೆ ಮಾಡಲಾಗಿದ್ದು, ಕಳೆದ ಬಜೆಟ್‌ನಲ್ಲಿ ಹಾರ್ಡ್‌ ಲಿಕ್ಕರ್‌ ಬೆಲೆ ಶೇ.20ರಷ್ಟು ಏರಿಕೆಯಾಗಿತ್ತು. ಕಳೆದ ಬಜೆಟ್‌ನಲ್ಲಿ ಬಿಯರ್‌ ಸುಂಕ ಶೇ.185ಕ್ಕೆ ಏರಿಕೆ ಆಗಿತ್ತು. ಈ ಬಾರಿಯೂ ಬಜೆಟ್‌ನಲ್ಲಿ ಮದ್ಯದ ಸುಂಕ ಹೆಚ್ಚಳ ಸಾಧ್ಯತೆ ಇದೆ.
ಗ್ಯಾರಂಟಿ ಯೋಜನೆಗಾಗಿ ಸಂಪನ್ಮೂಲಗಳ ಕೃಡೀಕರಣಕ್ಕಾಗಿ ಕೆಲವು ವಿಭಾಗದಲ್ಲಿ ತೆರಿಗೆ ಹೆಚ್ಚಳ ಮಾಡುತ್ತಾರೆ ಎನ್ನಲಾಗಿದೆ. ಆದರೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ತೆರಿಗೆ ಹೆಚ್ಚಳ ಮಾಡಿದರೆ ಹೇಗೆ ಎಂಬ ಭಯ ಸರ್ಕಾರಕ್ಕೆ ಇದೆ. ಹೀಗಾಗಿ ತೆರಿಗೆ ಹೆಚ್ಚಳ ಮಾಡದೇ ಬಜೆಟ್ ಮಂಡಿಸುವ ಸವಾಲು ಸಿದ್ದರಾಮಯ್ಯ ಅವರ ಮುಂದಿದೆ.
ರಾಜ್ಯಸಭೆ ಎಲೆಕ್ಷನ್​ಗೆ ಪಂಚ್!; ಕುದುರೆ ವ್ಯಾಪಾರ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
