ಬೆಂಗಳೂರು:ಇದೀಗ ಸಿಎಂ ಸಿದ್ದರಾಮಯ್ಯ 14ನೇ ಬಾರಿಗೆ ಬಜೆಟ್​ ಮಂಡಿಸಲಿದ್ದು ಪ್ರಾಸ್ತಾವಿಕ ಭಾಷಣ ಮಾಡಿದ್ದಾರೆ.
ಸೂಟ್​ಕೇಸ್​ನೊಂದಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಎಲ್ಲರಿಗೂ ವಂದಿಸಿದರು. ಸಿಎಂ ಸಿದ್ದರಾಮಯ್ಯ 14ನೇ ಬಾರಿಗೆ ಬಜೆಟ್​ ಮಂಡಿಸಿರುವುದು ಸಾರ್ವಕಾಲಿಕ ದಾಖಲೆಯಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ “ಬಸವಣ್ಣನವರಿಂದ ಹಿಡಿದು ನಾಲ್ವಡಿ ಕೃಷ್ಣರಾಜ ಒಡೆಯರ್​ ಅವರವರೆಗೆ ಅಭಿವೃದ್ಧಿಯ ಜತೆ ಸಾಮಾಜಿಕ ನ್ಯಾಯಕ್ಕೆ ಬೆಂಬಲ ನೀಡುವುದು ಕರ್ನಾಟಕದ ಘನ ಪರಂಪರೆ. ಈಗ ಮಂಡಿಸಲಿರುವ ಆಯವ್ಯಯದಲ್ಲಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎನ್ನುವ ಧ್ಯೇಯವನ್ನು ಮೂಲಮಂತ್ರವಾಗಿ ಇರಿಸಿಕೊಳ್ಳಲಾಗಿದೆ.
ಈ ಬಜೆಟ್​ನಲ್ಲಿ ಈ ವಿಚಾರವನ್ನು ಇನ್ನಷ್ಟು ಆಳವಾಗಿಸುವ ಪ್ರಯತ್ನ ಮಾಡಿದ್ದೇವೆ. ಆರ್ಥಿಕ ಮೂಲಗಳ ನಿರ್ವಹಣೆ, ಸಾಮಾಜಿಕ ಸ್ಥಿರತೆ ನಮ್ಮ ಗುರಿ ಆಗಿರಲಿದೆ. ಈ ಸಂದರ್ಭದಲ್ಲಿ ಅವರು ಗಿರೀಶ್ ಕಾರ್ನಾಡ್​ ಅವರ ಯಯಾತಿ ನಾಟಕದ ಡೈಲಾಗ್​ ಒಂದನ್ನು ನೆನೆಸಿಕೊಂಡರು.
ಪರಿಶಿಷ್ಟ ವರ್ಗ, ಪರಿಶಿಷ್ಟ ಪಂಗಡ, ರೈತರು, ಹಿಂದುಳಿದವರು ಮುಂತಾದವರಏಳಿಗೆ ಪ್ರಯತ್ನ ಮಾಡುತ್ತೇವೆ. 23-24ರ ಆಯವ್ಯಯವನ್ನು ಮಾಡುವಾಗ ನೋಟು ರದ್ದತಿ, ರಾಜಕೀಯ ಅಸ್ಥಿರತೆ, ಅನಿಯಂತ್ರಿತ ಬೆಲೆ ಏರಿಕೆ ಮುಂತಾದ ಸಮಸ್ಯೆಗಳಿಂದ ಬಳಲಿದ್ದು ಇದಕ್ಕೆ ಪರಿಹಾರವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.
ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸಲಾಗುವುದು. ಗೃಹಜ್ಯೋತಿ ಯೋಜನೆಯನ್ನು ಜುಲೈ ತಿಂಗಳಿನಿಂದ ಹಾಗೂ ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ ತಿಂಗಳಿನಲ್ಲಿ ಜಾರಿಗೆ ತರುತ್ತೇವೆ. ಯುವನಿಧಿ ಯೋಜನೆಯು 2023ರಲ್ಲಿ ಪದವಿ ಪಡೆದ ಯುವಜನರಿಗಾಗಿ ಜಾರಿಗೆ ಬರಲಿದೆ. ಅನ್ನಭಾಗ್ಯದಡಿ ಪ್ರತಿ ಫಲಾನುಭವಿಗೆ ಕೇಂದ್ರ ಸರ್ಕಾರದಿಂದ ಒದಗಿಸುತ್ತಿರುವ ಐದು ಕೆ.ಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರದಿಂದ ಒದಗಿಸುವ ಹೆಚ್ಚುವರಿ ಐದು ಕೆ.ಜಿ. ಸೇರಿದಂತೆ ಒಟ್ಟಾರೆ 10 ಕೆ.ಜಿ ಆಹಾರ ಧಾನ್ಯವನ್ನು ಪ್ರತಿ ತಿಂಗಳು ವಿತರಿಸಲು ನಾವು ಬದ್ಧರಾಗಿದ್ದೇವೆ.
ನಾವು ಗ್ಯಾರಂಟಿ ಯೋಜನೆಗಳನ್ನು ಯಾಕೆ ಘೋಷಿಸಿದ್ದೇವೆ? ಹಾಗೂ ಯಾಕೆ ಜಾರಿಗೊಳಿಸುತ್ತಿದ್ದೇವೆ? ಅವು ಬಿಟ್ಟಿ ಕೊಡುಗೆಗಳಲ್ಲ. ಈ ಸಂದರ್ಭದಲ್ಲಿ ಬಾಬಾಸಾಹೇಬ್ ಡಾ. ಬಿ. ಆರ್. ಚಿಂತನೆಯನ್ನು ಸರಿಸುತ್ತೇನೆ.
‘ಭದ್ರತೆಯ ಖಾತರಿ ಕೊಡದ ಆರ್ಥಿಕ ಯೋಜನೆಯಿಂದ ಯಾವ ಉಪಯೋಗವೂ ಇಲ್ಲ. ಯೋಜನೆ ಒಪ್ಪಿತವಾಗಬೇಕಾದರೆ, ಅದು ಮಿತವ್ಯಯದ್ದು ಮತ್ತು ಸುಭದ್ರವು ಆಗಿರಬೇಕು. ಮಿತವ್ಯಯದ್ದು ಆಗಿರದಿದ್ದರೆ, ಬಹುಶ: ನಡೆದೀತು. ಆದರೆ, ಸುಭದ್ರವಾಗಿಲ್ಲದಿದ್ದರೆ, ಖಂಡಿತ ನಡೆಯುವುದಿಲ್ಲ.
ಅನಿಯಂತ್ರಿತ ಬೆಲೆ ಏರಿಕೆ ಆಗುತ್ತಿರುವ ಸಂದರ್ಭದಲ್ಲಿ ಗೃಲಕ್ಷ್ಮೀ ಯೋಜನೆಯ ಮೂಲಕ ಮನೆಯೊಡತಿಯರಿಗೆ ಭದ್ರತೆಯನ್ನು ನೀಡುತ್ತದೆ. ಶಕ್ತಿ ಯೋಜನೆ ಮೂಲಕ ದೂರದ ಊರುಗಳಲ್ಲಿ ಮಹಿಳೆಯರಿಗೆ ಆದಾಯ ತಂದುಕೊಡುವ ಉದ್ಯೋಗ ಹುಡುಕಿಕೊಡುವಲ್ಲಿ ಸಹಾಯ ಮಾಡುತ್ತದೆ.” ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + eleven =
Remember me
