ಬೆಂಗಳೂರು:ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು  ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರು ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವ ವೇಳೆ ಹೇಳಿದ್ದಾರೆ.
ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಸೋಮವಾರ ಮಾತನಾಡಿದ  ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರು,  ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದಿದ್ದಾರೆ.
ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ರಾಜ್ಯಪಾಲರು ಹೇಳಿದ್ದಾರೆ.
ಹೊಸ ಸರ್ಕಾರ ರಚನೆಯಾದ ನಂತರ ಕಂದಾಯ ಇಲಾಖೆಯ ಜಿಲ್ಲಾಧಿಕಾರಿ ಉಪವಿಭಾಗಾಧಿಕಾರಿಗಳಲ್ಲಿ ಒಟ್ಟು 93,350 ಪ್ರಕರಣಗಳು ಬಾಕಿ ಇದ್ದು, ಈ ಪೈಕಿ 2024 ರ ಫೆಬ್ರವರಿ 5 ರ ವರೆಗೆ 84,253 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. 5787 ಪ್ರಕರಣಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.
“ಬೆಳ್ಳುಳ್ಳಿ ಕಬಾಬ್” ಟ್ರೆಂಡ್ ಬೆನ್ನಲ್ಲೇ ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ; ಮೊಯೆ..ಮೊಯೆ ಎಂದ ಗ್ರಾಹಕರು


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − four =
Remember me
