ಬೆಂಗಳೂರು:ರಾಜ್ಯ ಸರ್ಕಾರ ಬಸವಣ್ಣನ ತತ್ವದಡಿ ನಡೆಯುತ್ತಿದೆ. ಎಲ್ಲಾ ಸಮುದಾಯಗಳ ಪರವಾಗಿ, ಕುವೆಂಪು ಅವರ ಸರ್ವಜನಾಂಗದ ಶಾಂತಿ ತೋಟ ತತ್ವದಡಿ ಕೆಲಸ ಮಾಡುತ್ತಿದೆ. ಬಸವಣ್ಣ, ಸರ್ವಜ್ಞ ಸೇರಿ ಅನೇಕ ಸಂತರ ಶಾಂತಿ ತತ್ವ ಪಾಲನೆ ಮಾಡಲಾಗುತ್ತಿದೆ ಎಂದು ರಾಜ್ಯಪಾಲರಾದ ಗೆಹ್ಲೋಟ್ ಅವರು ಹೇಳಿದರು.
ಜಂಟಿ ಅಧಿವೇಶನ ಉದ್ಘಾಟಿಸಿ ಮಾತನಾಡಿದ ಗೆಹ್ಲೋಟ್ ಅವರು, ಇಂದಿರಾ ಕ್ಯಾಂಟೀನ್ ಮೂಲಕ ಸರ್ಕಾರ ರಾಜ್ಯವನ್ನು ಹಸಿವು ಮುಕ್ತ ಮಾಡಲಿದೆ. ಬಡವರು, ದುಡಿಯುವ ವರ್ಗದ ಜನರು, ವಲಸೆ ಕಾರ್ಮಿಕರು ಮುಂತಾದವರ ಹಸಿವು ತಣಿಸಲು ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಹಣ ನೀಡಲಾಗುತ್ತದೆ ಎಂದರು. ಮುಂದಿನ 5 ವರ್ಷಗಳ ಕಾಲ ಆರ್ಥಿಕತೆಗೆ ಒತ್ತು ನೀಡುತ್ತೇವೆ ಎಂದ ರಾಜ್ಯಪಾಲರು, ಜಾತಿ, ಧರ್ಮ, ಭೇದದ ವಿರುದ್ಧ ಮೊದಲಿನಿಂದಲೂ ಹೋರಾಟ ಮಾಡಿದ್ದೇವೆ. ಪರ ಧರ್ಮ ಹಾಗೂ ನೀತಿಯನ್ನ ಗೌರವಿಸುತ್ತೇವೆ. ಬುದ್ಧ, ಬಸವ, ನಾರಾಯಣ ಗುರು, ಅಂಬೇಡ್ಕರ್, ಕುವೆಂಪು ಇವರು ಕನಸು ಕಂಡಿದ್ದ ಸಮಾಜ ನಿರ್ಮಾಣ ಮಾಡುತ್ತೇವೆ ಎಂದು ಗೆಹ್ಲೋಟ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಪ್ರಸ್ತಾಪಆಹಾರ ಭದ್ರತೆ ಕಾಯ್ದೆ ಅಡಿ ಪ್ರಸ್ತುತ 5 ಕೆಜಿ ಅಕ್ಕಿ ಕೊಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಸೇರಿ 10 ಕೆಜಿ ಕೊಡುತ್ತಿದ್ದು, ರಾಜ್ಯವನ್ನು ಹಸಿವು ಮುಕ್ತ ಮಾಡಲಿದ್ದೇವೆ. ಪ್ರತಿ ಕೆಜಿಗೆ 34 ರೂಪಾಯಿ ವರ್ಗಾವಣೆ ಮಾಡುತ್ತೇವೆ. ಇದಕ್ಕಾಗಿ ಯಾವುದೇ ತ್ಯಾಗ ಮಾಡುತ್ತೇವೆ. ಅನ್ನ ನೀಡದ ಸರ್ಕಾರವನ್ನ ಜನ ದ್ರೋಹಿ ಸರ್ಕಾರ ಎನ್ನುತ್ತಾರೆ. ಆದರೆ ಇಂದಿರಾ ಕ್ಯಾಂಟಿನ್ ಮೂಲಕ ಜನರ ಹೊಟ್ಟೆ ತುಂಬಿಸಿದ್ದೇವೆ. ಯುವ ನಿಧಿ ಈಗಾಗಲೇ ಘೋಷಣೆ ಮಾಡಿದ್ದು, ಯುವನಿಧಿ‌ ಮೂಲಕ ನಿರುದ್ಯೋಗಿಗಳಿಗೆ ಭತ್ಯೆ ನೀಡುತ್ತೇವೆ. ಗೃಹಜ್ಯೋತಿಗೆ ೨೦೯ ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದ್ದೇವೆ. 2.14 ಕೋಟಿ ಕುಟುಂಬಗಳಿಗೆ ಈ ಯೋಜನೆ ಲಾಭವಾಗಲಿದೆ. ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದೇವೆ. ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಮನೆಯ ಮುಖ್ಯಸ್ಥೆ ಮಹಿಳೆಗೆ ನೀಡುತ್ತೇವೆ ಎಂದು ರಾಜ್ಯಪಾಲ ಗೆಹ್ಲೋಟ್ ಭಾಷಣದಲ್ಲಿ ತಿಳಿಸಿದರು.
ಉದ್ಯೋಗ ಸೃಷ್ಠಿಸಲು ಕೈಗಾರಿಕೆಗಳ ಸ್ಥಾಪನೆರಾಜಸ್ಥಾನ ಬಳಿಕ ಕರ್ನಾಟಕ ಹೆಚ್ಚು ಒಣ ಭೂಮಿ ಹೊಂದಿದೆ. ಬಹಳ ದಿನಗಳ ಬಳಿಕ ಬಾಕಿ ನೀರಾವರಿ ಯೋಜನೆ ಜಾರಿ ಮಾಡುತ್ತೇವೆ. ಕೆರೆ ತುಂಬಿಸುವ ಕೆಲಸ ಮಾಡುತ್ತಿದ್ದು, ರೈತರ ಆದಾಯ ಹೆಚ್ಚಾಗಲು‌ ಕ್ರಮ ತೆಗೆದುಕೊಳ್ಳುತ್ತೇವೆ. ಬೀಜ, ಗೊಬ್ಬರ ಸರಿಯಾದ ಸಮಯಕ್ಕೆ ಒದಗಿಸುತ್ತೇವೆ. ಎಪಿಎಂಸಿಗಳನ್ನು ಸುಧಾರಣೆ ಮಾಡಿ ರೈತಸ್ನೇಹಿ ಮಾಡುತ್ತೇವೆ. ಉದ್ಯೋಗ ಸೃಷ್ಟಿಸಲು ಕೈಗಾರಿಕೆ ಸ್ಥಾಪಿಸಲು ಗುರಿ ಹೊಂದಿದ್ದೇವೆ. ಪಕ್ಕದ ರಾಜ್ಯಗಳ ಜೊತೆಗೆ ಚೀನಾ ಜೊತೆಗೆ ಕೈಗಾರಿಕೆ ಪೈಪೋಟಿ ನೀಡುತ್ತಿದ್ದೇವೆ. ಬೆಂಗಳೂರು ಅಂತರಾಷ್ಟ್ರೀಯ‌ ಮಟ್ಟದ ನಗರವಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮಾಡುತ್ತೇವೆ. ಸರ್ಕಾರ ರಾಜ್ಯದ ಅಭಿವೃದ್ಧಿ ಹೇಗೆ ಮಾಡಬೇಕು ಎಂಬ ನೀಲನಕ್ಷೆ ಇದೆ. ಅದನ್ನು ಜಾರಿ ಮಾಡುವ ಇಚ್ಛಾಶಕ್ತಿ ಸರ್ಕಾರಕ್ಕಿದೆ ಎಂದು ರಾಜ್ಯಪಾಲರು ನುಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
