ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡನೆ ಮಾಡಿರುವ ಬಜೆಟ್​​ ಮೂಲಕವಾಗಿ​ ವಿವಾಹ ನೋಂದಾಣಿಯನ್ನು ಮತ್ತಷ್ಟು ಸರಳೀಕರಣಗೊಳಿಸಿದ್ದಾರೆ. ಇದುವರೆಗೆ ವಿವಾಹ ನೋಂದಣಿಗಾಗಿ ತಾಲೂಕು ಹಂತದ ಕಚೇರಿಗಳಿಗೆ ಅಲೆಯಬೇಕಿತ್ತು. ಇದೀಗ ಗ್ರಾಮ ಪಂಚಾಯಿತಿಗಳಲ್ಲೇ ವಿವಾಹ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ.
ಇದನ್ನೂ ಓದಿ:ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ; ಬಿಯರ್​​ ಮೇಲಿನ ಅಬಕಾರಿ ಸುಂಕ ಶೇಕಡ 10ರಷ್ಟು ಹೆಚ್ಚಳ
ಕಾವೇರಿ2.0 ತಂತ್ರಾಶದಲ್ಲಿ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶ ನೀಡಲಾಗುವುದು. ಗ್ರಾಮ ಪಂಚಾಯತಿ ಬಾಪೂ ಸೇವಾ ಕೇಂದ್ರ ಹಾಗು ಗ್ರಾಮ-1 ನಲ್ಲಿಯೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:ನಿತ್ಯಾನಂದ ಕೈಲಾಸಕ್ಕೆ ಸ್ಟಾರ್ ಹೀರೋಯಿನ್ ರಂಜಿತಾ ಪ್ರಧಾನಿ
ಇನ್ಮುಂದೆ ರಿಜಿಸ್ಟರ್​ ಮ್ಯಾರೇಜ್ ಆಗುವವರು ತಮ್ಮ ಗ್ರಾಮ ಪಂಚಾತಿಗಳಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಈ ಮೊದಲು ವಿವಾಹ ನೋಂದಣಿಗಾಗಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಅಲೆಯಬೇಕಿತ್ತು. ಇದೀಗ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಚಾಯಿತಿಗಳಲ್ಲಿ ವಿವಾಹ ನೋಂದಣಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಾಹ ನೋಂದಾಣಿ ಮಾಡಿಕೊಳ್ಳುವವರಿಗೆ ಅನುಕೂಲವಾಗಲಿದೆ.
ಬಿಜೆಪಿಯ ಯೋಜನೆಯನ್ನು ಕೈಬಿಟ್ಟ ಕಾಂಗ್ರೆಸ್: ಜಿಲ್ಲೆಗೊಂದು ಗೋಶಾಲೆ, ವಿವೇಕ ಸಿರಿಗೆ ಎಳ್ಳುನೀರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + four =
Remember me
