ಬೆಂಗಳೂರು:ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಎರಡು ವಿಧಾನಸಭಾ ಕ್ಷೇತ್ರ ಸೇರಿದಂತೆ ತೆರವಾಗಿರುವ ಸಿಂದಗಿ ವಿಧಾಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳನ್ನು ಎಐಸಿಸಿ ಇಂದು ಅಂತಿಮಗೊಳಿಸಿದೆ.
ಬಸವಕಲ್ಯಾಣಕ್ಕೆ ಮಲ್ಲಮ್ಮ ನಾರಾಯಣ ರಾವ್, (ದಿವಂಗತ ಶಾಸಕ ನಾರಾಯಣ ರಾವ್ ಪತ್ನಿ), ಮಸ್ಕಿಗೆ ಬಸವನಗೌಡ ಆರ್ ತುರುವಿಹಾಳ್, ಸಿಂದಗಿ ಕ್ಷೇತ್ರಕ್ಕೆ ಅಶೋಕ್ ಮನಗೂಳಿ (ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ) ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಮಾಡದೇ ಕಾದುನೋಡುವ ತಂತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಅನುಸರಿಸಿದೆ. ಸತೀಶ್ ಜಾರಕಿಹೊಳಿ ಅಭ್ಯರ್ಥಿ ಆಗುವಂತೆ ರಾಜ್ಯ ನಾಯಕರು ಹೇಳಿದ್ದರು. ಆದರೆ, ಸಿಡಿ ಪ್ರಕರಣದ ಬಳಿಕ ಸತೀಶ್ ಅವರು ಹಿಂದೇಟು ಹಾಕಿದ್ದರು. ಅಲ್ಲದೇ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರನ್ನೂ ಶಿಫಾರಸು ಮಾಡಲಾಗಿತ್ತು.
ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಲು ಮುಂದಾದ ಜೆಡಿಎಸ್​ ಶಾಸಕರು: ಕಾರಣವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
