ನವದೆಹಲಿ:ರಾಜ್ಯದಲ್ಲಿ ಮುಂದಿನ ತಿಂಗಳು ನಡೆಯಲಿರುವ ಮಸ್ಕಿ, ಬಸವ ಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಹಾಗೂ ತೆರವಾಗಿರುವ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ದಿವಂಗತ ಸುರೇಶ್ ಅಂಗಡಿ ಪತ್ನಿ ಮಂಗಳಾ ಸುರೇಶ್ ಅಂಗಡಿ ಅವರಿಗೆ ಟಿಕೆಟ್ ನೀಡಿದೆ.
ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಬಸವಕಲ್ಯಾಣದ ಯುವ ಬಿಜೆಪಿ ನಾಯಕ ಶರಣು ಸಲಗರ್ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿದೆ. ನಿರೀಕ್ಷೆಯಂತೆ ಮಸ್ಕಿ ವಿಧಾನಸಭೆ ಉಪ ಚುನಾವಣೆಗೆ ಪ್ರತಾಪ್​ ಗೌಡ ಪಾಟೀಲ ಅವರಿಗೆ ಟಿಕೆಟ್ ನೀಡಲಾಗಿದೆ.
ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳು ಸುಮಾರು 1 ಡಜನ್​ಗೂ ಹೆಚ್ಚಿದ್ದರು. ಆದರೂ ಬಿಜೆಪಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ.
ಸಂಸದ ಪ್ರತಾಪ್ ಸಿಂಹ ಮಗಳಿಗೆ ತಮ್ಮ ಕುರ್ಚಿ ಬಿಟ್ಟು ಕೊಟ್ಟ ಕೇಂದ್ರ ಸಚಿವೆ ಸ್ಮೃತಿ ಇರಾನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 8 =
Remember me
