ಶಿವಮೊಗ್ಗ:ಪಂಚ ರಾಜ್ಯಗಳ ಚುನಾವಣೆಯ ರಂಗಿನ ಮಧ್ಯದಲ್ಲಿಯೇ ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದ್ದು, ಇನ್ನು ನಾಲ್ಕು ದಿನಗಳಲ್ಲಿ ಉಪ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ನಾಲ್ಕು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ಆ ನಾಲ್ಕರಲ್ಲೂ ಬಿಜೆಪಿಯೇ ಗೆಲ್ಲಲಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಬೆಳಗಾವಿಯ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಅದರ ಜತೆ ಮಸ್ಕಿ, ಬಸವ ಕಲ್ಯಾಣ, ಸಿಂಧಗಿ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಿಗೆ ಪಕ್ಷದ ಚುನಾವಣಾ ಉಸ್ತುವಾರಿಗಳನ್ನು ಈಗಾಗಲೇ ಪ್ರಕಟಿಸಲಾಗಿದೆ. ಉಪ ಚುನಾವಣಾ ದಿನಾಂಕ ಘೋಷಣೆ ಆದ ನಂತರ ಅಭ್ಯರ್ಥಿಗಳ ಹೆಸರನ್ನೂ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಮಾರ್ಚ್​ 8ರಂದು ಬಜೆಟ್​ ನಡೆಯಲಿದೆ. ಬಜೆಟ್​ ಮಂಡನೆಯಾದ ನಂತರ ಚುನಾವಣಾ ಪ್ರಚಾರವನ್ನು ಅವರು ಆರಂಭಿಸಲಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವ ಯಡಿಯೂರಪ್ಪನವರು ಸೋಮವಾರದಂದು ಡಿವಿಜನ್​ ವೀರಶೈವ ಹಾಸ್ಟೆಲ್​ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕಾರ್ಯಕ್ರಮದ ನಂತರ ಕೋಟೆ ಸೀತಾರಾಮಾಂಜನೇಯ ದೇವಸ್ಥಾನ, ಕೋಟೆ ಮಾರಿಕಾಂಬಾ ದೇವಸ್ಥಾನ, ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. (ಏಜೆನ್ಸೀಸ್​)ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಸೆಲ್ಫಿಗೆ ಫೋಸ್​ ಕೊಡಲು ಹೋಗಿ ಅಪ್ಪ ಮಗನ ಸಾವು!

ಗಂಡ ಮನೆಯಲ್ಲಿ ಇಲ್ಲವೆಂದು ಪ್ರಿಯತಮನನ್ನು ಕರೆಸಿಕೊಂಡ ಹೆಂಡತಿ! ಅಮೇಲಾಗಿದ್ದು ಏನು ಗೊತ್ತಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − five =
Remember me
