ಬೆಂಗಳೂರು:10 ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್​​ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚರಿಸಲಿವೆ.  ಡಬಲ್ ಡೆಕ್ಕರ್ ಎಲೆಕ್ಟ್ರಿಕ್ ಬಸ್‌ ಖರೀದಿಸುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಡಬಲ್​ ಡೆಕ್ಕರ್​​ ಬಸ್​ಗಳಿಗೆ ಟೆಂಡರ್​ ಕರೆಯಲಾಗಿದ್ದು, ಶೀಘ್ರದಲ್ಲಿಯೇ ಟೆಂಡರ್​ ಪೂರ್ಣವಾಗಲಿದೆ  ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಡಬಲ್ ಡೆಕ್ಕರ್ ಬಸ್‌ಗಳಿಗೆ ಅಂಡರ್‌ಪಾಸ್‌ ಮತ್ತು ಇತರ ಅಡೆತಡೆಗಳಲ್ಲಿ ಸಂಚರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇದಕ್ಕಾಗಿ ಈಗಾಗಲೇ ಐದುಮಾರ್ಗ ರೂಪಿಸಲಾಗಿದೆ. ಈ ಡಬಲ್​ ಡೆಕ್ಕರ್​ ಬಸ್​ಗಳಿಗೆ ಬಿಎಂಟಿಸಿ ಬಸ್​ನ ಬಣ್ಣವನ್ನೇ ಅಂತಿಮಗೊಳಿಸಲಾಗಿದೆ. ಆದರೆ ಡಬಲ್​ ಡೆಕ್ಕರ್​​ ಬಸ್​ ವಿನ್ಯಾಸದ ಬಗ್ಗೆ ಚರ್ಚೆ ನಡೆದಿದೆ. ಜಪಾನ್​ ಡಬಲ್​ ಡೆಕ್ಕರ್​ ಬಸ್​ ಮಾದರಿಯನ್ನು ನನ್ನ ಆಪ್ತರು ಕಳಿಸಿದ್ದು, ಅದನ್ನು ಸಹ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಕಳಿಸಿದ್ದೇನೆ ಎಂದಿದ್ದಾರೆ.
ಅಲ್ಲದೇ 120 ನಾನ್-ಎಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಟೆಂಡರ್​​ ಕರೆಯಲಾಗಿದೆ. ಬಸ್‌ಗಳಲ್ಲಿ ಇಂಟೆಲಿಜೆಂಟ್ ಟ್ರಾನ್ಸ್‌ಪೋರ್ಟ್ ಮ್ಯಾನೇಜ್‌ಮೆಂಟ್ ಸಿಸ್ಟಮ್, ಪ್ಯಾಸೆಂಜರ್ ಡಿಸ್‌ಪ್ಲೇ ಬೋರ್ಡ್‌ಗಳು, ಸಿಸಿಟಿವಿ ವ್ಯವಸ್ಥೆಗಳು ಮತ್ತು ಪ್ಯಾನಿಕ್ ಬಟನ್‌ಗಳು ಇತ್ಯಾದಿಗಳನ್ನು ಅಳವಡಿಸಲಾಗಿದೆ. ಫೆಬ್ರವರಿ 13 ರಂದು ಟೆಂಡರ್ ಪ್ರಾರಂಭವಾಗುವ ಸಾಧ್ಯತೆ ಇದೆ.
ಬಾಯಿಯ ದುರ್ವಾಸನೆಯಿಂದ ಮುಜುಗರ ಆಗ್ತಿದ್ಯಾ? ಈ ಸಲಹೆಗಳನ್ನು ಅನುಸರಿಸಿ


ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twenty − eighteen =
Remember me
