ಬೆಂಗಳೂರು:ಕರ್ನಾಟಕದ 865 ಹಳ್ಳಿಗಳಿಗೆ ಮಹಾರಾಷ್ಟ್ರ ಸರ್ಕಾರ ಬಾಬು ಜಗಜೀವನ್ ರಾಂ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಿರುವುದು ಉದ್ಧಟತನ ಪರಮಾವಧಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಿಡಿ ಕಾರಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸರಣಿ ಸಂದೇಶ ಹಂಚಿಕೊಂಡಿರುವ ಬೊಮ್ಮಾಯಿ‌, ವಿಮೆ ಆದೇಶ ವಾಪಸ್ ಪಡೆಯದಿದ್ದರೆ ಮಹಾರಾಷ್ಟ್ರ ಗಡಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ಇದೇ ರೀತಿ ವಿಮೆ ಸೌಲಭ್ಯ ನೀಡುವ ಕ್ರಮವಹಿಸಬೇಕಾಗುತ್ತದೆ ಎಂದು ತಿರುಗೇಟಿನ ಎಚ್ಚರಿಕೆ ನೀಡಿದ್ದಾರೆ.
ಗಡಿ ವಿವಾದ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿದೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಶಾಂತಿ, ಸೌಹಾರ್ದತೆ ಕಾಯ್ದುಕೊಳ್ಳಲು ಸೂಚಿಸಿದ್ದಾರೆ.
ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ.5/5— Basavaraj S Bommai (@BSBommai)April 5, 2023
ಕರ್ನಾಟಕ ಗಡಿಯಲ್ಲಿರುವ ಜನರಿಗೆ ವಿಮೆ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರ ಸರ್ಕಾರ, ಅವರಿಂದ ಮಹಾರಾಷ್ಟ್ರಕ್ಕೆ ಸೇರಿದವರೆಂದು ಘೋಷಣಾ ಪತ್ರ ತೆಗೆದುಕೊಳ್ಳುವುದು ಖಂಡನೀಯ.5/5
ಆದಾಗ್ಯೂ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಿರುವುದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನವಾಗಿದೆ. ವಿಮೆ ಆದೇಶ ನೀಡುವ ವೇಳೆ ಮಹಾರಾಷ್ಟ್ರಕ್ಕೆ ಸೇರಿದವರು ಎಂದು ಘೋಷಣಾ ಪತ್ರ ಬರೆಯಿಸಿಕೊಳ್ಳುತ್ತಿರುವುದು ಖಂಡನೀಯ.
ಗಡಿಯಲ್ಲಿ ಗೊಂದಲ ಸೃಷ್ಟಿಸುವುದಿಲ್ಲ ಎಂದು ಅಮಿತ್ ಷಾ ಅವರ ಮುಂದೆ ಒಪ್ಪಿಕೊಂಡಂತೆ ನಡೆದುಕೊಂಡು ಅವರ ಸೂಚನೆಯನ್ನು ಗೌರವಿಸಬೇಕು. ಗಡಿಯಲ್ಲಿ ಶಾಂತಿ ಕದಡುವ ಪ್ರಯತ್ನ ಸಹಿಸಲಾಗದು ಎಂದು ಮಹಾ ಸರ್ಕಾರಕ್ಕೆ ಸಿಎಂ ಬೊಮ್ಮಾಯಿ‌ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
