ಬೆಂಗಳೂರು:ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಿದ್ದೇವೆ ಎಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಈ ಸಂದರ್ಭ ಮುಖ್ಯಮಂತ್ರಿ ಬೊಮ್ಮಾಯಿ ‘ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ. ಕರ್ನಾಟಕದಲ್ಲಿಯೂ ಕೂಡ ಸಂಪುರ್ಣ ಬಂದೋಬಸ್ತು ಮಾಡಲಾಗಿದೆ. ನಾನೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಲಾಗಿದೆ.
ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಕರೆ ಮಾಡಿ ಸೌಹಾರ್ದತೆ ಕಾಪಾಡಿಕೊಳ್ಳಲು ಹೇಳಿದ್ದಾರೆ. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದೇವೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆ ಆಗಕೂಡದು ಎಂದು ಆಗ್ರಹಿಸಿದ್ದೇವೆ. ಅಮಿತ್ ಶಾ, ಅವರಾಗಲಿ ಬೇರೆ ಯಾರೂ ನನ್ನ ಬಳಿ ಈ ಕುರಿತು ಮಾತನಾಡಿಲ್ಲ’ ಎಂದು ಬೊಮ್ಮಾಯಿ ಮಾಹಿತಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 18 =
Remember me
