ಕಾರವಾರ:ಸುಪ್ರೀಂ ಕೋರ್ಟಿನಲ್ಲಿ ತೀರ್ಮಾನ ಆಗುವವರೆಗೆ ಅರಣ್ಯ ಅತಿಕ್ರಮಣದಾರರನ್ನು ಒಕ್ಕಲೆಬ್ಬಿಸುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾನ ಮಾಡಿದ್ದಾರೆ. ಭಾನುವಾರ ಶಿರಸಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಅರಣ್ಯ ರಕ್ಷಣೆ ಮತ್ತು ಜೀವ ವೈವಿಧ್ಯತೆಯನ್ನು ಒಟ್ಟಿಗೇ ತೆಗೆದುಕೊಂಡು ಹೋಗುವ ಅವಶ್ಯಕತೆ ಇದೆ ಎಂದು ಹೇಳಿದರು.
ಈಗಾಗಲೇ ವಿಚಾರ ಸುಪ್ರೀಂ ಕೋರ್ಟ್​ನಲ್ಲಿದೆ. ಅರಣ್ಯ ಹಕ್ಕು ಕಾಯ್ದೆಯಡಿ ಮೂರು ತಲೆಮಾರಿನ ದಾಖಲೆ ಕೊಡಬೇಕು ಎಂಬ ನಿಯಮವಿದೆ. ಅದನ್ನು ಒಂದು ತಲೆಮಾರಿಗೆ ಇಳಿಸಬೇಕು ಎಂದು ನಾವು ಕೇಂದ್ರ ಸರ್ಕಾರಕ್ಕೆ ಅಭಿಪ್ರಾಯ ತಿಳಿಸಿದ್ದೇವೆ. ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವರದಿ ನೀಡಲಿದೆ. ಆದರೆ, ಅಲ್ಲಿಯವರೆಗೆ ಅತಿಕ್ರಮಣದಾರರಿಗೆ ತೊಂದರೆಕೊಡುವ ಪ್ರಶ್ನೆಯೇ ಇಲ್ಲ ಎಂದರು‌.
ಅತಿಕ್ರಮಣ ಸಮಸ್ಯೆಯಿಂದ ಜಿಲ್ಲೆಯಲ್ಲಿ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ ಎಂದರು. ಕಳೆದ ವರ್ಷ ನೆರೆಯಿಂದ ಕಳಚೆ ಗ್ರಾಮಕ್ಕೆ ಹಾನಿಯಾಗಿದೆ. ಅಲ್ಲಿ‌ ಅರಣ್ಯೀಕರಣಕ್ಕೆ ಗ್ರೀನ್ ಬಜೆಟ್ ನಲ್ಲಿ ಅವಕಾಶ ನೀಡಿದ್ದೇನೆ.ಗ್ರಾಮ ಸ್ಥಳಾಂತರಕ್ಕೆ ಅನುದಾನ ನೀಡಲು ಬದ್ಧವಾಗಿದ್ದೇನೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 14 =
Remember me
