ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್​​ಗೆ ಸ್ಪಷ್ಟವಾಗಿ ಬಹುಮತ ಸಿಕ್ಕಿದ್ರು, ಸರ್ಕಾರದಲ್ಲಿ ಸಿಎಂ ಯಾರಾಗಲಿದ್ದಾರೆ? ಎನ್ನುವ ಚರ್ಚೆಯ ಜೊತೆಗೆ ಪೈಪೋಟಿ ಕೂಡಾ ಜೋರಾಗಿದೆ. ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಕುರಿತಾಗಿ ಎಲ್ಲಡೆ ಸುದ್ದಿ ಹಬ್ಬಿತ್ತು. ಆದರೆ ಈ ನಡುವೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೊಸ ಬಾಂಬ್​ ಸಿಡಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಎದುರು ಮಾತನಾಡಿದ ಅವರು, ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಅಂತಿಮವಾಗಿ ಇನ್ನೂ ಸಿಎಂ ಆಯ್ಕೆ ಆಗಿಲ್ಲ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು  ರಣದೀಪ್‌ ಸಿಂಗ್‌ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.
ಮುಂದಿನ ಸಿಎಂ ಸಿದ್ದರಾಮಯ್ಯ ಅಂತಾ ಎಲ್ಲೆಡೆ ಬೆಂಬಲಿಗರ ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಸದ್ಯ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಕಾಂಗ್ರೆಸ್ ನಿರ್ಧಾರ ಕೈಗೊಂಡಾಗ ನಾವು ತಿಳಿಸುತ್ತೇವೆ. ಸಿಎಂ ಆಯ್ಕೆ ವಿಚಾರವಾಗಿ ಈಗ ಹರಿದಾಡುತ್ತಿರುವುದು ಸುಳ್ಳು ಸುದ್ದಿ. ಶಾಸಕಾಂಗ ಪಕ್ಷದ ನಾಯಕರು ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಇಂದು ಅಥವಾ ನಾಳೆ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಎಐಸಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಆದರೆ ನಾಳೆ ಪ್ರಮಾಣವಚನ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸುದ್ದಿ ಹರಿದಾಡಿತ್ತು. ಸಿದ್ದರಾಮಯ್ಯ ಅವರನ್ನೇ ಸಿಎಂ ಎಂದು ಅಂತಿಮಗೊಳಿಸಲಾಗಿದೆ ಎಂದು ಅನೇಕರು ಹೇಳಿದ್ದರು. ಹಲವೆಡೆ ಸಿದ್ದು ಅಭಿಮಾನಿಗಳು ಸಂಭ್ರಮಾಚರಣೆ ಕೂಡ ಮಾಡಿದ್ದರು. ಆದರೆ ಸುರ್ಜೇವಾಲ ಅವರು ಇದಕ್ಕೆಲ್ಲ ಬ್ರೇಕ್‌ ಹಾಕಿದ್ದಾರೆ.
ಸಿದ್ದರಾಮಯ್ಯಗೆ ಸಿಎಂ ಸ್ಥಾನ ಖಚಿತ; ಡಿ.ಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಹೈ ಅಲರ್ಟ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 8 =
Remember me
