ಬೆಂಗಳೂರು:ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿ, ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ ವತಿಯಿಂದ ಆಯೋಜಿಸಿರುವ “ನಾ ನಾಯಕಿ” ಕಾರ್ಯಕ್ರಮದಲ್ಲಿ ಪ್ರತಿ ಮನೆಯ ಗೃಹಿಣಿಗೆ ”ಗೃಹ ಲಕ್ಷ್ಮಿ” ಯೋಜನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಿಡುಗಡೆ ಮಾಡಿದ್ದಾರೆ.
ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಅಗತ್ಯ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ರಾಜ್ಯ ಕಾಂಗ್ರೆಸ್ ತೀರ್ಮಾನಿಸಿದೆ.
ಕಾಂಗ್ರೆಸ್ ಗ್ಯಾರಂಟಿ ನಂ.02'ಗೃಹಲಕ್ಷ್ಮಿ' ಯೋಜನೆರಾಜ್ಯದ ಎಲ್ಲಾ ಗೃಹಿಣಿಯರಿಗೆ ಪ್ರತಿ ತಿಂಗಳಿಗೆ 2000 ರೂಪಾಯಿ ಸಹಾಯಧನ!ಬೆಲೆಯೇರಿಕೆಯಿಂದ ಬಸವಳಿದು ಮನೆಯ ನಿರ್ವಹಣೆ ಮಾಡಲು ಹರಸಾಹಸ ಪಡುತ್ತಿರುವ ರಾಜ್ಯದ ಎಲ್ಲಾ ಗೃಹಿಣಿಯರೇ,ನಿಮ್ಮ ಮನೆ ನಿರ್ವಹಣೆಇನ್ಮುಂದೆ ಕಾಂಗ್ರೆಸ್ ಹೊಣೆ!#CongressGuaranteepic.twitter.com/5C2yGbkz8s— Karnataka Congress (@INCKarnataka)January 16, 2023
ಕಾಂಗ್ರೆಸ್ ಗ್ಯಾರಂಟಿ ನಂ.02'ಗೃಹಲಕ್ಷ್ಮಿ' ಯೋಜನೆರಾಜ್ಯದ ಎಲ್ಲಾ ಗೃಹಿಣಿಯರಿಗೆ ಪ್ರತಿ ತಿಂಗಳಿಗೆ 2000 ರೂಪಾಯಿ ಸಹಾಯಧನ!ಬೆಲೆಯೇರಿಕೆಯಿಂದ ಬಸವಳಿದು ಮನೆಯ ನಿರ್ವಹಣೆ ಮಾಡಲು ಹರಸಾಹಸ ಪಡುತ್ತಿರುವ ರಾಜ್ಯದ ಎಲ್ಲಾ ಗೃಹಿಣಿಯರೇ,ನಿಮ್ಮ ಮನೆ ನಿರ್ವಹಣೆಇನ್ಮುಂದೆ ಕಾಂಗ್ರೆಸ್ ಹೊಣೆ!#CongressGuaranteepic.twitter.com/5C2yGbkz8s
ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದೆ. ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು 2,000ರಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲು ನಿರ್ಧರಿಸಿದೆ. ಈ ಯೋಜನೆಯಿಂದ ರಾಜ್ಯದ 1.5 ಕೋಟಿ ಗೃಹಿಣಿಯರಿಗೆ ನೆರವಾಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
