ಮೈಸೂರು:ಕರ್ನಾಟಕ ಕಾಂಗ್ರೆಸ್​ ಅನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಛಿದ್ರ ಮಾಡಲು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್​ ಅವರು ಕರ್ನಾಟಕದ ಶಾಸಕರೊಬ್ಬರಿಗೆ 500 ಕೋಟಿ ರೂಪಾಯಿ ಆಫರ್​ ನೀಡಿದ್ದಾರೆ ಎಂದು ತೆಲಂಗಾಣ ಕೆಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಜಮೀರ್​ ಅಹ್ಮದ್​ ಹೆಸರು ಮುನ್ನಲೆಗೆ ಬಂದಿದೆ. ಇದು ರಾಜ್ಯರಾಜಕೀಯಲದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಕರ್ನಾಟಕ ಕಾಂಗ್ರೆಸ್​ನಲ್ಲಿ ಒಡಕುಂಟು ಮಾಡಲು ಶಾಸಕ ಜಮೀರ್​ ಅಹಮದ್​ 500 ಕೋಟಿ ಆಮಿಷಕ್ಕೆ ಒಳಗಾದ್ರಾ? ಎಂಬಿತ್ಯಾದಿ ಚರ್ಚೆಗಳು ಶುರುವಾಗಿದೆ. ಈ ಬಗ್ಗೆ ಜಮೀರ್​ ಅವರು ಹೇಳಿದ್ದೇನು ಗೊತ್ತಾ?ನಾನು ತೆಲಂಗಾಣ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದು ಸತ್ಯ. ಆದರೆ 500 ಕೋಟಿ ರೂ. ಆಫರ್​ ಬಗ್ಗೆ ಗೊತ್ತಿಲ್ಲ ಎಂದು ಶಾಸಕ ಜಮೀರ್​ ಅಹಮದ್​ ಹೇಳಿದ್ದಾರೆ.
ಮೈಸೂರಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್​, ನಾನು ಹೈದರಾಬಾದ್​ಗೆ ಹೋಗಿದ್ದು ನಿಜ. ಕೆಸಿಆರ್​ ಭೇಟಿ ಮಾಡಿದ್ದೂ ನಿಜ. ನಮ್ಮ ಭೇಟಿಯಲ್ಲಿ ರಾಜಕೀಯ ಚರ್ಚೆ ಆಗಿಲ್ಲ. ಶಾಸಕ ರೋಹಿತ್​ ರೆಡ್ಡಿ ನನ್ನ ಸ್ನೇಹಿತ. ಅವರು ಸಿಎಂ ಚಂದ್ರಶೇಖರ ರಾವ್​ ಅವರನ್ನು ಭೇಟಿ ಮಾಡುವಂತೆ ಕೇಳಿಕೊಂಡಿದ್ದರು. ಅವರೇ ಬೇರೆ ಪಕ್ಷ, ನಾವೇ ಬೇರೆ ಪಕ್ಷ, ಏನೂ ಸಂಬಂಧವೇ ಇಲ್ಲ. 500 ಕೋಟಿ ರೂ. ಬಗ್ಗೆ ಯಾರು ಆರೋಪ ಮಾಡಿದ್ದಾರೋ ಅವರನ್ನೇ ಕೇಳಿ ಎಂದಿದ್ದಾರೆ.
ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಠಾಣೆಯಲ್ಲಿ ಕೇಸ್​!

3 ವರ್ಷದ ಹಿಂದಷ್ಟೇ ಮದ್ವೆಯಾಗಿದ್ದ ದಂಪತಿ ಬದುಕಿಗೆ ಕೊಳ್ಳಿ ಇಟ್ಟ ಕಟ್ಟೆ! ತುರುವೇಕೆರೆಯಲ್ಲಿ ದುರ್ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
