ಬೆಂಗಳೂರು:ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್​ನ ರಮೇಶ್ ಬಾಬು ದೂರು ನೀಡಿದ್ದಾರೆ.
ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಪೋಸ್ಟ್​ಗಳ ಹಿನ್ನೆಲೆ ರಮೇಶ್ ಬಾಬು ದೂರು ನೀಡಿದ್ದಾರೆ. ಆ್ಯನಿಮೇಟೆಡ್ ವೀಡಿಯೋ ಒಂದರಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆ ಬಿಜೆಪಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸುಳ್ಳು ಪೋಸ್ಟ್ ಹಾಕಿದರೆ ಪೊಲೀಸ್ ಕೇಸ್! ಜಾಲತಾಣಗಳ ಮೇಲೆ ಸರ್ಕಾರದ ಹದ್ದಿನ ಕಣ್ಣು
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರ, ಮುಖ್ಯಮಂತ್ರಿ, ಮಂತ್ರಿಗಳು, ಕಾಂಗ್ರೆಸ್ ನಾಯಕ ವಿರುದ್ಧ ಸುಳ್ಳು ಮಾಹಿತಿ, ತಿರುಚಿದ ಫೋಟೋಗಳನ್ನು ಹಾಕುವವರ ಹೆಡೆಮುರಿ ಕಟ್ಟಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅಪಪ್ರಚಾರ ಮಾಡುವ ಹಾಗೂ ತಿರುಚಿದ ಫೋಟೋಗಳ ಮೂಲಕ ವಿಕೃತಿಯನ್ನುಂಟು ಮಾಡುವವರ ಸಂಖ್ಯೆಯನ್ನು ನಿಯಂತ್ರಿಸುವುದಕ್ಕಾಗಿ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ ಸಾಮಾಜಿನ ಜಾಲತಾಣಗಳ ಮೇಲೆ ನಿಗಾ ಇರಿಸುವಂತೆ ಸೈಬರ್ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಕಾಂಗ್ರೆಸ್‌ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಿದ ನಂತರ ಸಾಮಾಜಿಕ ಜಾಲತಾಣದ ದುರ್ಬಳಕೆ ಹೆಚ್ಚುತ್ತಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಪ್ರಕಾರ, ಆಕ್ಷೇಪಾರ್ಹ ಮತ್ತು ಆಧಾರ ರಹಿತ ಟೀಕೆ, ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ. ಇದೇ ನಿಯಮ ಆಧರಿಸಿ ಇಂತಹ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:ಮೊದಲ ಬಾರಿ ಚುಂಬಿಸಿ ಡೆಟಾಲ್​ನಿಂದ ಬಾಯಿ ತೊಳೆದಿದ್ದರಂತೆ ಬಾಲಿವುಡ್​ನ ಈ ನಟಿ!
ಸಿಐಡಿಯಲ್ಲಿರುವ ಸೈಬರ್ ವಿಭಾಗದಲ್ಲಿ ಪ್ರತ್ಯೇಕ ಇನ್ಸ್‌ಪೆಕ್ಟರ್ ಒಬ್ಬರನ್ನು ನೇಮಕ ಮಾಡಲಾಗುತ್ತದೆ. ಅವರು ಪ್ರತಿನಿತ್ಯ ಸಾಮಾಜಿಕ ಜಾಲತಾಣಗಳನ್ನು ಗಮನಿಸಿ, ಸರ್ಕಾರದ ವಿರುದ್ಧ ಇರುವ ಪೋಸ್ಟ್‌ಗಳನ್ನು ಗಮನಿಸಬೇಕು. ಅವುಗಳ ಸೃಷ್ಟಿಕರ್ತರು, ಎಲ್ಲಿಂದ ಪೋಸ್ಟ್ ಆಗಿವೆ ಎಂಬುದನ್ನು ದೃಢಪಡಿಸಿಕೊಂಡು ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವ ಜವಾಬ್ದಾರಿ ನೀಡಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
