ಬೆಂಗಳೂರು:ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲು ‘ಭಾರತ್’ ಎಂದು ಬದಲಿಸುವ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (ಎನ್‌ಸಿಇಆರ್‌ಟಿ) ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ‘ಇಂಡಿಯಾ’ ಎಂಬ ಪದವನ್ನೇ ಮುಂದುವರಿಸುತ್ತದೆ ಎಂದಿದ್ದಾರಲ್ಲದೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಅಡ್ಮಿನಿಸ್ಟ್ರೇಟಿವ್ ಸರ್ವೀಸ್, ಇಂಡಿಯನ್ ಫಾರಿನ್ ಸರ್ವೀಸ್ ಎಂದು ಏಕೆ ಹೇಳುತ್ತಿದ್ದೇವೆ? ಎಂದು ಪ್ರಶ್ನಿಸಿದ್ದಾರೆ.
ಎನ್‌ಡಿಎ ಸರ್ಕಾರ ಎನ್‌ಸಿಇಆರ್‌ಟಿ ಮೇಲೆ ಒತ್ತಡ ಹೇರಿ ಈ ಪ್ರಸ್ತಾವ ಅಂಗೀಕರಿಸುವಂತೆ ಮಾಡಿದೆ. ಎನ್‌ಸಿಇಆರ್‌ಟಿ ತೆಗೆದುಕೊಂಡಿರುವ ನಿಲುವು ಸಂಪೂರ್ಣ ತಪ್ಪು. ಎನ್‌ಡಿಎ ಸರ್ಕಾರ ಭಾರತದ ಇತಿಹಾಸವನ್ನು ಬದಲಾಯಿಸಲು ಸಾಧ್ಯವೇ ಇಲ್ಲ. ಇಂಡಿಯಾ ಪದವನ್ನು ಭಾರತ್ ಎಂದು ಬದಲಿಸುವ ನಿಲವು ಜನವಿರೋಧಿ ಎಂದು ಕೇಂದ್ರ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + 5 =
Remember me
