ಬೆಂಗಳೂರು:ರಾಜ್ಯಾದ್ಯಂತ ಇಳಿಕೆ ಮುಖ ಕಂಡಿದ್ದ ಕರೊನಾ ಪ್ರಮಾಣ ಗುರುವಾರ ಏಕಾಏಕಿ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ 500ಕ್ಕೂ ಅಧಿಕ ಪ್ರಕರಣಗಳು ದೃಢವಾಗಿದ್ದು, ರಾಜ್ಯದ ಏಕದಿನ ಏರಿಕೆ 2 ಸಾವಿರ ದಾಟಿದೆ.
ಇಂದು 2,052 ಜನರಲ್ಲಿ ಕರೊನಾ ಸೋಂಕು ದೃಢವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 29,01,247ರಷ್ಟಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 506 ಪ್ರಕರಣ ಕಾಣಿಸಿಕೊಂಡಿದೆ. ನಗರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12,26,463ಕ್ಕೆ ಏರಿದೆ. ಅದರಲ್ಲಿ 12,02,194 ಸೋಂಕಿತರು ಗುಣಮುಖರಾಗಿದ್ದು, 8416 ಸಕ್ರಿಯ ಪ್ರಕರಣಗಳು ಬಾಕಿಯುಳಿದಿವೆ. ರಾಜ್ಯದಲ್ಲಿ ಸದ್ಯ 23,253 ಸಕ್ರಿಯ ಪ್ರಕರಣ ಬಾಕಿಯುಳಿದಿವೆ. ಇಂದು 1332 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ವರದಿಯಲ್ಲಿ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 35 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟಾರೆ ಮೃತರ ಸಂಖ್ಯೆ 36,491ಕ್ಕೆ ಏರಿಕೆಯಾಗಿದೆ. ಇಂದಿನ ಕರೊನಾ ಪಾಸಿಟಿವಿಟಿ ಪ್ರಮಾಣ ಶೇ. 1.37ರಷ್ಟಿದ್ದರೆ ಮರಣ ಪ್ರಮಾಣ ಶೇ. 1.70ರಷ್ಟಿದೆ.
ಇಂದಿನ 29/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/QgVmc7fkvg@VisitUdupi@mangalurucorp@DCDK9@mysurucitycorp@SmartDavangere@WFRising@DDChandanaNews@BelagaviKA@AIRBENGALURU1@KarnatakaVarthe@PIBBengalurupic.twitter.com/6bpEry12bR
— K'taka Health Dept (@DHFWKA)July 29, 2021

ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣ ಪತ್ತೆಯಾಗಿದ್ದರೆ ಉಳಿದಂತೆ ದಕ್ಷಿಣ ಕನ್ನಡದಲ್ಲಿ 396, ಉಡುಪಿಯಲ್ಲಿ 174, ಮೈಸೂರಿನಲ್ಲಿ 157 ಮತ್ತು ಹಾಸನದಲ್ಲಿ 136 ಜನರಲ್ಲಿ ಸೋಂಕು ದೃಢವಾಗಿದೆ. ಬಾಗಲಕೋಟೆ, ಬಳ್ಳಾರಿ, ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿಯಲ್ಲಿ ಏಕದಿನ ಏರಿಕೆ ಸಂಖ್ಯೆ ಒಂದಂಕಿಯಲ್ಲಿದೆ. (ಏಜೆನ್ಸೀಸ್)
ತಮಿಳಿನ ಖ್ಯಾತ ನಟನ ವಿರುದ್ಧ ಗಂಭೀರ ಆರೋಪ! ಯುವರತ್ನ ಹೀರೋಯಿನ್ ಪತಿಯ ಮೌನಕ್ಕೆ ಅರ್ಥವೇನು?

ವೈದ್ಯಕೀಯ ಶಿಕ್ಷಣದಲ್ಲಿ ಒಬಿಸಿಗೆ ಶೇ. 27 ಮೀಸಲಾತಿ ಘೋಷಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
