ಬೆಂಗಳೂರು:ರಾಜ್ಯದಲ್ಲಿ ಕರೊನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಇಂದು ಕೇವಲ 1,291 ಕರೊನಾ ಪ್ರಕರಣಗಳು ರಾಜ್ಯಾದ್ಯಂತ ದೃಢವಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ. 0.94ಕ್ಕೆ ಕುಸಿದಿದೆ. ಒಟ್ಟಾರೆ ಪ್ರಕರಣಗಳ ಸಂಖ್ಯೆ 28,85,238ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 40 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟಾರೆ ಮೃತರ ಸಂಖ್ಯೆ 36,197ಕ್ಕೆ ಹೆಚ್ಚಳವಾಗಿದೆ. ಇಂದಿನ ಕರೊನಾ ಮರಣ ಪ್ರಮಾಣ ಶೇ. 3.09ರಷ್ಟಿದೆ. ಒಂದೇ ದಿನದಲ್ಲಿ 3,015 ಸೋಂಕಿತರು ಗುಣುಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಗುಣಮುಖರಾದವರ ಸಂಖ್ಯೆ 28,21,491ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 27,527ಕ್ಕೆ ಇಳಿದಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಇಂದಿನ 19/07/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/ElmPCIJpza@CMofKarnataka@mla_sudhakar@drashwathcn@GovindKarjol@LaxmanSavadi@BBMPCOMM@DC_Dharwad@DCKodagu@dcudupi@DCDK9@mysurucitycorp@mangalurucorp@CEOUdupipic.twitter.com/XZaC0OI939
— K'taka Health Dept (@DHFWKA)July 19, 2021

ಇಂದು ಬೆಂಗಳೂರಿನಲ್ಲಿ 266 ಪ್ರಕರಣಗಳು ಕಾಣಿಸಿಕೊಂಡಿದ್ದು, ನಗರದ ಒಟ್ಟಾರೆ ಪ್ರಕರಣಗಳ ಸಂರ್ಖಯೆ 12,22,455ಕ್ಕೆ ಹೆಚ್ಚಿದೆ. ಅದರಲ್ಲಿ ಈವರೆಗೆ 11,95,843 ಸೋಂಕಿತರು ಗುಣಮುಖರಾಗಿದ್ದು, 10,809 ಸಕ್ರಿಯ ಪ್ರಕರಣಗಳು ಬಾಕಿಯಿವೆ. ಇಂದು ದಕ್ಷಿಣ ಕನ್ನಡದಲ್ಲಿ 126, ಹಾಸನ ಮತ್ತು ಮೈಸೂರಿನಲ್ಲಿ ತಲಾ 125, ಚಿಕ್ಕಮಗಳೂರಿನಲ್ಲಿ 100 ಪ್ರಕರಣಗಳು ಕಾಣಿಸಿಕೊಂಡಿವೆ. ಉಳಿದಂತೆ ಬೇರೆಲ್ಲ ಜಿಲ್ಲೆಗಳ ಪ್ರಕರಣಗಳ ಸಂಖ್ಯೆ 100ಕ್ಕಿಂತ ಕಡಿಮೆಯಿದೆ. ಬಾಗಲಕೋಟೆ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಏಕದಿನ ಏರಿಕೆಯ ಸಂಖ್ಯೆ ಒಂದಂಕಿಯಲ್ಲಿದೆ. ಕೊಪ್ಪಳ ಜಿಲ್ಲೆಯಲ್ಲಿ ಒಂದೂ ಪ್ರಕರಣ ದಾಖಲಾಗಿಲ್ಲ.
ಸಹಚರರ ಸಾಕಲು ಡ್ರಗ್ಸ್ ದಂಧೆಗಿಳಿದ ರೌಡಿ! ಮಲಯಾಳಿ ಮಧು ಗ್ಯಾಂಗ್​ನ್ನು ಸೆರೆ ಹಿಡಿದ ಪೊಲೀಸರು

ಚಿನ್ನಾಭರಣ ಪ್ರಿಯರಿಗೆ ಶುಭಸುದ್ದಿ: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

ತಿರುಪತಿ ತಿಮ್ಮಪ್ಪನಿಗೆ ಆರೂವರೆ ಕೆಜಿ ತೂಕದ ಚಿನ್ನದ ಖಡ್ಗ ಅರ್ಪಿಸಿದ ದಂಪತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
