ಬೆಂಗಳೂರು:ಕಳೆದ ವರ್ಷ ಸನಾತನ ಧರ್ಮಸನಾತನ ಧರ್ಮ ಡೆಂಗ್ಯೂ ಹಾಗೂ ಮಲೇರಿಯಾ ಇದ್ದಂತೆ ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿ ತೀವ್ರ ವಿವಾದಕ್ಕೀಡಾಗಿದ್ದ ತಮಿಳುನಾಡು ಸಿಎಂ ಸ್ಟಾಲಿನ್​ ಪುತ್ರ, ಸಚಿವ ಉದಯನಿಧಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಕೋರ್ಟ್​ ಸಮನ್ಸ್​ ಜಾರಿ ಮಾಡಿದೆ.
ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್​ ವಿರುದ್ಧ ದೇಶಾದ್ಯಂತ ಪ್ರಕರಣಗಳು ದಾಖಲಾಗಿದ್ದವು. ಅದರಂತೆ ಬೆಂಗಳೂರಿನಲ್ಲೂ ಉದಯನಿಧಿ ಸ್ಟಾಲಿನ್​ ವಿರುದ್ಧ ದೂರು ದಾಖಲಾಗಿತ್ತು. ಅದರಂತೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಲಯ ಉದಯನಿಧಿ ಸ್ಟ್ಯಾಲಿನ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ.
ಇದನ್ನೂ ಓದಿ:ಬಾಕ್ಸ್​ ಪ್ಯಾಕ್​ ಮಾಡುವಾಗಲೇ ಕುಸಿದು ಬಿದ್ದು ಯುವಕ ಸಾವು; ವೈದ್ಯರು ಹೇಳಿದ್ದಿಷ್ಟು
ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪರಮೇಶ್​ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು. ಅದರಂತೆ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ  42 ನೇ ಎಸಿಎಂಎಂ ನ್ಯಾಯಾಲಯ ಮಾರ್ಚ್​ 04ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ಜಾರಿ ಮಾಡಿದೆ.
ನಾನು ಮಾತನಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ನಾವು ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ನಾನು ನನ್ನ ನಿಲುವನ್ನು ಬದಲಾಯಿಸುವುದಿಲ್ಲ. ನಾನು ನನ್ನ ಸಿದ್ಧಾಂತದ ಬಗ್ಗೆ ಮಾತ್ರ ಮಾತನಾಡಿದ್ದೇನೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + twelve =
Remember me
