ಬೆಂಗಳೂರು:ಕರ್ನಾಟಕದ 2023ರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಐದನೇ ಹಾಗೂ ಜೆಡಿಎಸ್ ತನ್ನ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಇದೀಗ ಬಿಜೆಪಿ ತನ್ನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ:ಜೆಡಿಎಸ್​ ಪಟ್ಟಿಯಲ್ಲಿ ಮಹತ್ವದ ಬದಲಾವಣೆ; 12 ಕ್ಷೇತ್ರಗಳಲ್ಲಿ ಹೊಸದಾಗಿ ಅಭ್ಯರ್ಥಿಗಳ ಘೋಷಣೆ!
ಕಾಂಗ್ರೆಸ್​ ತನ್ನ ಐದನೇ ಪಟ್ಟಿಯಲ್ಲಿ ನಾಲ್ವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದರೆ, ಜೆಡಿಎಸ್ ತನ್ನ ಮೂರನೇ ಪಟ್ಟಿಯಲ್ಲಿ 59 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಜತೆಗೆ 12 ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿ ಹೊಸದಾಗಿ ಇನ್ನೊಂದು ಪಟ್ಟಿಯನ್ನು ಘೋಷಣೆ ಮಾಡಿತ್ತು. ಅಲ್ಲದೆ ಬಾಹ್ಯ ಬೆಂಬಲ ನೀಡುತ್ತಿರುವ ಕ್ಷೇತ್ರಗಳ ಪಟ್ಟಿಯನ್ನೂ ಪ್ರಕಟಿಸಿತ್ತು.
ಇದನ್ನೂ ಓದಿ:ಐದನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​; ಮುಖ್ಯಮಂತ್ರಿ ಎದುರಿನ ಅಭ್ಯರ್ಥಿ ಬದಲು
ಈಗ ಬಿಜೆಪಿ ನಾಲ್ಕನೇ ಪಟ್ಟಿಯನ್ನು ಪ್ರಕಟಿಸಿದ್ದು, ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಹಿರಂಗಪಡಿಸಿದೆ. ಇದುವರೆಗೆ ಕೆ.ಎಸ್. ಈಶ್ವರಪ್ಪ ಅವರು ಸ್ಪರ್ಧಿಸುತ್ತಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಎಸ್​ಟಿ ಕ್ಷೇತ್ರಕ್ಕೆ ಬಿ.ವಿ.ನಾಯಕ್ ಅವರ ಹೆಸರನ್ನು ಅಂತಿಮಗೊಳಿಸಿ ಪ್ರಕಟಿಸಲಾಗಿದೆ.
ಕೆ.ಎಸ್.ಈಶ್ವರಪ್ಪ ಅವರ ಬಲಗೈ ಬಂಟ ಎಸ್.ಎನ್.ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಅಳೆದೂ ತೂಗಿ ನಾಮಪತ್ರ ಸಲ್ಲಿಕೆಗೆ ಇನ್ನೊಂದೇ ದಿನ ಇರುವಾಗ ಹೆಸರು ಪ್ರಕಟಿಸಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿರುವ ಚನ್ನಬಸಪ್ಪ, ಈ ಹಿಂದೆ ಸಿದ್ದರಾಮಯ್ಯ ಅವರ ತಲೆ ಕಡಿಯುವುದಾಗಿ ಹೇಳಿ ರಾಜ್ಯಾದ್ಯಂತ ಸುದ್ದಿಯಾಗಿದ್ದರು.
ಪುತ್ರನ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ನಟಿ ಶ್ರುತಿ ಕೆನ್ನೆ ಹಿಂಡಿದ ಮಾಜಿ ಸಿಎಂ!

ಇಬ್ಬರ ಆಸೆಗೂ ಕೊಳ್ಳಿ ಇಟ್ಟ ದಳ್ಳುರಿ: ಮೂರ್ತಿಗೂ ಇಲ್ಲ, ರಾಜ್​ಗೂ ಇಲ್ಲ ಕಾಂಗ್ರೆಸ್ ಟಿಕೆಟ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
