ಬೆಂಗಳೂರು:ವಿಧಾನಸಭಾ ಚುನಾವಣೆಯ ಮತಎಣಿಕೆಯಲ್ಲಿ ಕಾಂಗ್ರೆಸ್​ ಪಕ್ಷ ಭರ್ಜರಿ ಮುನ್ನಡೆ ಸಾಧಿಸಿದೆ. ಮುನ್ನಡೆಯಲ್ಲೇ ಕಾಂಗ್ರೆಸ್​ ಮ್ಯಾಜಿಕ್​ ನಂಬರ್​ ದಾಟಿದೆ. ಫಲಿತಾಂಶ ಹೀಗೆ ಮುಂದುವರಿದರೆ ಕಾಂಗ್ರೆಸ್​ ಈ ಬಾರಿ ಅಧಿಕಾರದ ಗದ್ದುಗೆ ಏರಲಿದೆ.
ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್​ ಪ್ರಕಾರ ಕಾಂಗ್ರೆಸ್ 117 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮ್ಯಾಜಿಕ್​ ನಂಬರ್​ ಅನ್ನು ದಾಟಿದೆ. ಉಳಿದಂತೆ ಬಿಜೆಪಿ 75​ ಹಾಗೂ ಜೆಡಿಎಸ್​ 23 ಮತ್ತು ಇತರೆ 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದ್ದು, ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಇದೀಗ ಕಾಂಗ್ರೆಸ್​ ಪಕ್ಷ 117 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಫಲಿತಾಂಶ ಹೀಗೆ ಮುಂದುವರಿದರೆ ಕಾಂಗ್ರೆಸ್​ ಅಧಿಕಾರಕ್ಕೇರಲಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.
LIVE| ಕರ್ನಾಟಕ ಚುನಾವಣಾ ಫಲಿತಾಂಶ 2023: ಕ್ಷಣ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
