ಹಾವೇರಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರಿನಲ್ಲಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ.
ಹಾವೇರಿ ಜಿಲ್ಲೆಯ 6 ರಲ್ಲಿ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಶಿಗ್ಗಾವಿಯಲ್ಲಿ ಮಾತ್ರ ಸಿಎಂ ಬೊಮ್ಮಾಯಿ ಅವರು ಮುನ್ನಡೆ ಸಾಧಿಸಿದ್ದಾರೆ. ಕಳೆದ ಬಾರಿ 5 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್​ ಒಂದು ಕಡೆ ಮಾತ್ರ ಗದ್ದಿತ್ತು. ಆದರೆ, ಈ ಬಾರಿ ಫಲಿತಾಂಶ ಉಲ್ಟಾ ಆಗುವ ಲಕ್ಷಣಗಳು ಕಾಣುತ್ತಿವೆ.
ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್​ ಮತ್ತು ಜೆಡಿಎಸ್​ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.
ಇದನ್ನೂ ಓದಿ:ಕರ್ನಾಟಕ ಚುನಾವಣಾ ಫಲಿತಾಂಶ: ಭಾರೀ ಮುನ್ನಡೆಯೊಂದಿಗೆ ಮ್ಯಾಜಿಕ್​ ನಂಬರ್​ ದಾಟಿದ ಕಾಂಗ್ರೆಸ್​
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.
LIVE| ಕರ್ನಾಟಕ ಚುನಾವಣಾ ಫಲಿತಾಂಶ 2023: ಕ್ಷಣ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ

ಕರ್ನಾಟಕ ಚುನಾವಣಾ ಫಲಿತಾಂಶ: ಹಾವೇರಿ ಜಿಲ್ಲೆಯ ಅಂಚೆ ಮತದಾನದಲ್ಲಿ ಯಾರು ಯಾರಿಗೆ ಮುನ್ನಡೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
