ರಾಮನಗರ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಸದ್ಯ ಅಂಚೆ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ರಾಮನಗರ ಜಿಲ್ಲೆಯ ಅಂಚೆ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡವರ ವಿವರ ಈ ಕೆಳಕಂಡಂತಿದೆ.
ಅಂಚೆ ಮತದಾನರಾಮನಗರ ವಿಧಾನಸಭಾ ಕ್ಷೇತ್ರಜೆಡಿಎಸ್ ನಿಖಿಲ್ ಕುಮಾರಸ್ವಾಮಿ-367 (ಮುನ್ನಡೆ)ಕಾಂಗ್ರೆಸ್ ಇಕ್ಬಾಲ್ ಹುಸೇನ್-186ಬಿಜೆಪಿ ಗೌತಮ್ ಗೌಡ-55
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಬಿಜೆಪಿ ಸಿ.ಪಿ.ಯೋಗೇಶ್ವರ್-434ಜೆಡಿಎಸ್ ಹೆಚ್.ಡಿ.ಕುಮಾರಸ್ವಾಮಿ-523 (ಮುನ್ನಡೆ)ಕಾಂಗ್ರೆಸ್ ಗಂಗಾಧರ್-46
ಕನಕಪುರ ವಿಧಾನಸಭಾ ಕ್ಷೇತ್ರಕಾಂಗ್ರೆಸ್ ಡಿ.ಕೆ.ಶಿವಕುಮಾರ್-560 (ಮುನ್ನಡೆ)ಬಿಜೆಪಿ ಆರ್.ಅಶೋಕ್-186ಜೆಡಿಎಸ್ ಬಿ.ನಾಗರಾಜು-66
ಮಾಗಡಿ ವಿಧಾನಸಭಾ ಕ್ಷೇತ್ರಕಾಂಗ್ರೆಸ್ ಹೆಚ್.ಸಿ.ಬಾಲಕೃಷ್ಣ-320 (ಮುನ್ನಡೆ)ಜೆಡಿಎಸ್ ಎ.ಮಂಜುನಾಥ್-297ಬಿಜೆಪಿ ಪ್ರಸಾದ್ ಗೌಡ-60
ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್​ ಮತ್ತು ಜೆಡಿಎಸ್​ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.
LIVE| ಕರ್ನಾಟಕ ಚುನಾವಣಾ ಫಲಿತಾಂಶ 2023: ಕ್ಷಣ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 10 =
Remember me
