ಬೆಂಗಳೂರು:ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜನಾದೇಶ ಇಂದು ಹೊರಬಿಳಲಿದೆ. ಎಲ್ಲಾ ಪಕ್ಷದ ಅಭ್ಯರ್ಥಿಗಳು ಸೋಲು-ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ.
ಕಾಂಗ್ರೆಸ್​​, ಜೆಡಿಎಸ್​​, ಬಿಜೆಪಿ ಪಕ್ಷದಲ್ಲಿ ಹಲವು ವರ್ಷಗಳಿಂದ ಒಂದೇ ಪಕ್ಷದಿಂದ ಅವರದ್ದೇ ಆಗಿರುವ ಕ್ಷೇತ್ರದಲ್ಲಿ ನಿಂತು ಗೆಲುವು ಸಾಧಿಸುತ್ತಾ ಬಂದಿರುವ ಘಟಾನುಘಟಿಗಳು ಹಿನ್ನಡೆ ಪಡೆದುಕೊಳ್ಳುತ್ತಿದ್ದಾರೆ. ಈ ಬೆಳವಣಿಗೆ ಘಟಾನುಘಟಿ ನಾಯಕರಲ್ಲಿ ಆತಂಕ ಮೂಡಿಸಿದೆ.
ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಟಿ ರವಿ ಹಿನ್ನಡೆ ಪಡೆದುಕೊಂಡಿದ್ದಾರೆ. ಯಶ್ವಂತಪುರದ ಎಸ್​​.ಟಿ ಸೋಮಶೇಖರ್​​ ಅವರು ಮೊದಲ ಸುತ್ತಿನ ಮತ ಏಣಿಕೆಯಿಂದಲೂ ಭಾರಿ ಹಿನ್ನಡೆ ಪಡೆದುಕೊಂಡಿದ್ದಾರೆ. ಹೊಸಕೋಟೆ ಕ್ಷೇತ್ರದ ಅಭ್ಯರ್ಥಿ ಎಂ.ಟಿ,ಬಿ ನಾಗರಾಜ್ ಅವರು ಹಿನ್ನೆಡೆ ಪಡೆದಿದ್ದಾರೆ.
ವರುಣ ಕ್ಷೇತ್ರದ ಕಾಂಗ್ರೆಸ್​​ ಅಭ್ಯರ್ಥಿ ಸಿದ್ದರಾಮಯ್ಯ ಅವರ ವಿರುದ್ಧವಾಗಿ ಸ್ಪರ್ಧೆ ಮಾಡಿದ್ದ ಬಿಜೆಪಿಯ ಘಟಾನುಘಟಿ ನಾಯಕ ವಿ. ಸೋಮಣ್ಣ ಅವರು ಬಾರಿ ಹಿನ್ನಡೆ ಪಡೆದಿದ್ದಾರೆ. ವರುಣ ಹಾಗೂ ಚಾಮರಾಜನಗರದ ಎರಡು ಕ್ಷೇತ್ರದಲ್ಲಿಯೂ ಹಿನ್ನೆಡೆಯಲ್ಲಿದ್ದಾರೆ.
ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವಿನ ಗದ್ದುಗೆ ಗುದ್ದಾಟ ಎನ್ನುವುದಕ್ಕಿಂತ ಸಹೋದರ ನಡುವೆ ನಡೆಯುತ್ತಿರುವ ಒಂದು ರಾಜಕೀಯ ಹೋರಾಟವಾಗಿದೆ. ಬಿಜೆಪಿ ಅಭ್ಯರ್ಥಿ ಕುಮಾರ್​​ ಬಂಗಾರಪ್ಪ ಅವರು ಭಾರಿ ಹಿನ್ನಡೆ ಪಡೆದುಕೊಂಡಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಮಧು ಬಂಗಾರಪ್ಪ ಬಾರಿ ಮುನ್ನಡೆ ಪಡೆದಿದ್ದಾರೆ.
ಕಾಂಗ್ರೆಸ್​​ನ ಗಾಂಧಿನಗರ ಕ್ಷೇತ್ರದ ಅಭ್ಯರ್ಥಿ ದಿನೇಶ್​ಗುಂಡೂರಾವ್​ ಅವರು ಭಾರಿ ಹಿನ್ನಡೆಯಲ್ಲಿದ್ದಾರೆ. ದಾವಣಗೆರೆ ಕ್ಷೇತ್ರದ ಕಾಂಗ್ರೆಸ್​​ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ ಹಿನ್ನೆಡೆ ಬಾರಿ ಪಡೆದಿದ್ದಾರೆ. ಚನ್ನಪಟ್ಟಣದ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ್​​ ಹಾಗೂ ಕೊಳ್ಳೆಗಾಲ ಕ್ಷೇತ್ರದ ಎನ್​ ಮಹೇಶ್​​ ಅವರು ಹಿನ್ನೆಡೆ ಸಾಧಿಸಿದ್ದಾರೆ. ಈ ಮೂಲಕವಾಗಿ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ಹಲವು ಘಟಾನುಘಟಿ ನಾಯಕರಿದ್ದಾರೆ.
2018ರ ಫಲಿತಾಂಶ ಏನಿತ್ತು?2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.
ಕಾಲಿಗೆ ಮೊಬೈಲ್ ಕಟ್ಟಿಕೊಂಡು ಮತ ಎಣಿಕೆ ಕೇಂದ್ರಕ್ಕೆ ಬಂದ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 5 =
Remember me
