ಉಡುಪಿ:ನಟ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಬಂದು ಉಡುಪಿ ಜಿಲ್ಲೆಯಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮತದಾನ ಮಾಡುವುದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಆದರೆ ಪ್ರಚಾರಕ್ಕೆ ಹೋಗುವುದಿಲ್ಲ. ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.
ಇದನ್ನೂ ಓದಿ:ಕರ್ನಾಟಕ ಚುನಾವಣೆ 2023: ಉತ್ತಮ ಆರಂಭ, 9 ಗಂಟೆಯವರೆಗೆ ಶೇ. 8 ರಷ್ಟು ಮತ ಚಲಾವಣೆ
ಬಾಲ್ಯದಲ್ಲಿ ಉಡುಪಿ ನಗರ ಬೆಳೆಯಬೇಕು ಎಂದು ಆಸೆ ಇತ್ತು. ಈಗ ಬಂದು ನೋಡಿದರೆ ಮೊದಲೇ ಚೆನ್ನಾಗಿತ್ತು ಎಂದು ಅನಿಸುತ್ತಿದೆ. ನಾಯಕನಾದವ ಊರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ಕ್ಷೇತ್ರದ ಜನರ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.
ಇದನ್ನೂ ಓದಿ:ವೋಟರ್ ಐಡಿ ಮರೆತು ಬಂದ ಪ್ರಮೋದಾ ದೇವಿ ಒಡೆಯರ್! ಮುಂದೇನಾಯ್ತು?
ಹಳ್ಳಿ ಭಾಗದಲ್ಲಿ ಮತದಾನದ ಬಗ್ಗೆ ಜನಕ್ಕೆ ಕಾಳಜಿ ಹೆಚ್ಚು. ನಮ್ಮ ನಾಯಕ ಯಾರಾಗಬೇಕು ಎಂದು ಜನ ಹೆಚ್ಚೆಚ್ಚು ಸಂಖ್ಯೆಯಲ್ಲಿ ಮತದಾನ ಮಾಡುತ್ತಾರೆ. ನಗರ ಜೀವನ ಬೇರೆ ಆಗಿರುತ್ತದೆ. ಯಾವ ನಾಯಕರು ಅಧಿಕಾರಕ್ಕೆ ಬರುತ್ತಾರೆ ಎಂದು ನಾವು ನಿರೀಕ್ಷೆ ಮಾಡುತ್ತಿದ್ದೇವೆ. ಯುವಜನರು ಯಾರನ್ನು ಆಯ್ಕೆ ಮಾಡುತ್ತಾರೆ ಅವರು ನಮ್ಮ ದೇಶದ ಭವಿಷ್ಯ ಆಗಿರುತ್ತಾರೆ. ಚುನಾವಣಾ ಪ್ರಕ್ರಿಯೆಗೆ ಹೊಸ ಹೊಸ ಮುಖಗಳು ಬರಲೇಬೇಕು. ಹೊಸ ನಾಯಕರು ಬಂದಾಗ ಹೊಸ ಹೊಸ ನಿರೀಕ್ಷೆಗಳು ಇರುತ್ತವೆ ಎಂದು ರಕ್ಷಿತ್ ಶೆಟ್ಟಿ ಅಭಿಪ್ರಾಯಪಟ್ಟರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
