ಕೋಲಾರ:ಮತದಾನ ಪ್ರಕಿಯೆ ಮುಗಿದಿದ್ದು, ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈ ನಡುವೆ ಪಕ್ಷದ ಕಾರ್ಯಕರ್ತರು ಹೊಡೆದಾಡಿಕೊಂಡಿರುವ ಬಗ್ಗೆ ವಿವಿಧೆಡೆ ವರದಿಯಾಗುತ್ತಿವೆ. ಇದೀಗ ಕ್ಷುಲ್ಲಕ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಜೆಡಿಎಸ್​ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಈ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದಿದೆ.

ಇದನ್ನೂ ಓದಿ:ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಕೇಳಿ ಬಂತು ಲಿಂಗಾಯತ ಸಿಎಂ ಕೂಗು
ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ತಜಮುಲ್ ಹಲ್ಲೆಗೊಳಗಾದ ವ್ಯಕ್ತಿ. ಜೆಡಿಎಸ್ ಪಕ್ಷದ ಮುಖಂಡ ಸಾಧಿಕ್, ಆರೀಫ್ ಸೇರಿದಂತೆ ಇನ್ನಿತರಿಬ್ಬರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಸದ್ಯ ಹಲ್ಲೆಗೊಳಗಾದ ಕಾಂಗ್ರೆಸ್ ಪಕ್ಷದ ಮುಖಂಡ ತಜಮುಲ್​ನನ್ನು ಚಿಕಿತ್ಸೆಗಾಗಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಚುನಾವಣಾ ಫಲಿತಾಂಶದಂದು ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿ
ಹಲ್ಲೆಗೊಳಗಾದ ತಜಮುಲ್​ ಚಿಕಿತ್ಸೆಗೆ ದಾಖಲಾಗುತ್ತಿದ್ದಂತೆ, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ. ಸದ್ಯ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 3 =
Remember me
