ರಾಮನಗರ:ಜೆಡಿಎಸ್​ ಭದ್ರಕೋಟೆ ಎನಿಸಿಕೊಂಡಿದ್ದ ರಾಮನಗರ ಜಿಲ್ಲೆಯನ್ನು ಕಾಂಗ್ರೆಸ್​ ಛಿದ್ರ ಮಾಡಿದೆ. ನಾಲ್ಕು ವಿಧಾನಸಭಾ ಕ್ಷೇತ್ರದಲ್ಲಿ ಮೂರು ಕ್ಷೇತ್ರಗಳು ಕಾಂಗ್ರೆಸ್ ತೆಕ್ಕೆಗೆ ಬಿದ್ದಿವೆ.
ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್​ ಸೋಲುಂಡಿದ್ದು, ಭಾರಿ ಮುಖಭಂಗವಾಗಿದೆ. ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಗೆಲುವು ದಾಖಲಿಸಿದ್ದಾರೆ. ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ. ಬಾಲಕೃಷ್ಣ ವಿಜಯೋತ್ಸವ ಆಚರಿಸಿದ್ದಾರೆ. ಕನಕಪುರ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರು ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣ ಒಂದು ಕ್ಷೇತ್ರ ಬಿಟ್ಟು ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯಭೇರಿ ಬಾರಿಸಿದೆ.
ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್​ ಪ್ರಕಾರ ಕಾಂಗ್ರೆಸ್​ 133 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ 65 ಮತ್ತು ಜೆಡಿಎಸ್​ 21 ಹಾಗೂ ಇತರೆ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್​ ಸ್ಪಷ್ಟಬಹುಮತ ಸಾಧಿಸಿದ್ದು, ಸರ್ಕಾರ ರಚನೆ ಮಾಡುವುದು ಬಹುತೇಕ ಫಿಕ್ಸ್​ ಆಗಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್​ 80 ಮತ್ತು ಜೆಡಿಎಸ್​ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್​ ಮತ್ತು ಜೆಡಿಎಸ್​ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.
ಕನಕಪುರದಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಡಿಕೆಶಿ ಗೆಲುವು; ಆರ್​. ಅಶೋಕ್​ಗೆ ಮುಖಭಂಗ

ಚಾಮರಾಜನಗರದಲ್ಲಿ ಸೋಮಣ್ಣ ಸೋಲು; ಗೆಲುವಿನ ನಗೆ ಬೀರಿದ ಪುಟ್ಟರಂಗಶೆಟ್ಟಿ

ಚಿಕ್ಕಬಳ್ಳಾಪುರದಲ್ಲಿ ಡಾ.ಕೆ.ಸುಧಾಕರ್​​ಗೆ ಹೀನಾಯ ಸೋಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + six =
Remember me
