ವಿಜಯನಗರ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ ಅವರು ಮತ ಚಲಾಯಿಸಿದ್ದಾರೆ. ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿದ್ದಾರೆ. ಮಂಜಮ್ಮ ಜೋಗತಿ ಅವರು ಮತದಾನ ಜಾಗೃತಿಯ ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ.
ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಕುಟುಂಬ ಸಮೇತರಾಗಿ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಂಡಿದ್ದಾರೆ.
ಉಡುಪಿ: ನಟ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಬಂದು ಉಡುಪಿ ಜಿಲ್ಲೆಯಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮತದಾನ ಮಾಡುವುದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಆದರೆ ಪ್ರಚಾರಕ್ಕೆ ಹೋಗುವುದಿಲ್ಲ. ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.
ಕರ್ನಾಟಕ ವಿಧಾನಸಭೆಯು ಒಟ್ಟು 224 ಸದಸ್ಯ ಬಲವನ್ನು ಹೊಂದಿದ್ದು, ಸರ್ಕಾರ ರಚನೆ ಮಾಡಲು ಯಾವುದೇ ಪಕ್ಷಕ್ಕೆ 113 ಸದಸ್ಯರ ಬಲವುಳ್ಳ ಸ್ಪಷ್ಟ ಬಹುಮತ ಬೇಕಾಗಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದ್ದು, ಯಾರು ಕರ್ನಾಟಕದ ಮುಂದಿನ ಆಡಳಿತ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − two =
Remember me
