ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣೆ-2023ರ ಬಹುತೇಕ ಫಲಿತಾಂಶ ಹೊರಬಿದ್ದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದ ಹಲವಾರು ಸಚಿವರು ಚುನಾವಣಾ ಕಣದಲ್ಲಿ ಮುಗ್ಗರಿಸಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ವೈಖರಿ ಹಾಗೂ ಸರ್ಕಾರದ ವಿರುದ್ಧವಿದ್ದ ಅಸಮಾಧಾನವನ್ನು ಜನರು ಮತದಾನದ ಮೂಲಕ ಹೊರಹಾಕಿದ್ದಾರೆ. ಚುನಾವಣಾ ಫಲಿತಾಂಶವೇ ಇದಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎನ್ನಬಹುದು.
ಸಚಿವ ಸಂಪುಟದ ಸಚಿವರಲ್ಲಿ ಕೆಲವರು ಸೋಲನ್ನೆ ಅರಿಯದ ಹಾಗೂ ಗೆಲ್ಲುವಂತಹ ಅಭ್ಯರ್ಥಿಗಳೆಂದು ಪರಿಗಣಿಸಿ ಅನೇಕ ಸಚಿವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೊಡಲಾಗಿತ್ತು. ಆದರೆ, ಮತದಾರರ ವಿಶ್ವಾಸ ಗೆಲ್ಲುವಲ್ಲಿ ಅನೇಕ ಸಚಿವರು ವಿಫಲರಾಗಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರ ದೀರ್ಘಾವಧಿ ಆಡಳಿತ ನಡೆಸಲ್ಲ, ಡಿಕೆಶಿ-ಸಿದ್ದರಾಮಯ್ಯ ಒಬ್ಬರ ಮೇಲೊಬ್ಬರು ಬಂಡಾಯ ಏಳ್ತಾರೆ; ಯತ್ನಾಳ್
ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಶಿಕ್ಷಣ ಸಚಿವ ಡಾ ಕೆ ಸುಧಾಕರ್, ಬಳ್ಳಾರಿ ಗ್ರಾಮಾಂತರದಿಂದ ಸ್ಪರ್ಧಿಸಿದ್ದ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು, ಕೆಆರ್ ಪೇಟೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಯುವಜನ ಮತ್ತು ಕ್ರೀಡೆ, ರೇಷ್ಮೆ ಸಚಿವ ನಾರಾಯಣಗೌಡ, ಮುಧೋಳದಿಂದ ಸ್ಪರ್ಧಿಸಿದ್ದ ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ್ ಕಾರಜೋಳ ಪರಾಭವಗೊಂಡಿದ್ದಾರೆ.
ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಸತಿ ಹಾಗೂ ಮೂಲಸೌಕರ್ಯ ಇಲಾಖೆ ಸಚಿವ ವಿ.ಸೋಮಣ್ಣ, ಬೀಳಗಿಯಿಂದ ಸ್ಪರ್ಧಿಸಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಚಿಕ್ಕನಾಯಕನಹಳ್ಳಿಯಿಂದ ಸ್ಪರ್ಧಿಸಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಸೋಲು ಕಂಡಿದ್ದಾರೆ.
ಅಲ್ಲದೇ, ಹಿರೀಕೆರೂರಿನಿಂದ ಸ್ಪರ್ಧಿಸಿದ್ದ ಕೃಷಿ ಸಚಿವ ಬಿ.ಸಿ.ಪಾಟೀಲ್, ಹೊಸಕೋಟೆಯಿಂದ ಸ್ಪರ್ಧಿಸಿದ್ದ ಪೌರಾಡಳಿತ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಹಾಗೂ ಯಲಬುರ್ಗದಿಂದ ಕಣಕ್ಕಿಳಿದಿದ್ದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಮತ್ತು ತಿಪಟೂರಿನಿಂದ ಸ್ಪರ್ಧಿಸಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪರಾಭವಗೊಂಡಿದ್ದಾರೆ.(ಏಜೆನ್ಸೀಸ್)
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:two × 3 =
Remember me
