ಬೆಂಗಳೂರು:ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳು ದೀರ್ಘ ಸಮಯದಿಂದ ಕಾಯುತ್ತಿದ್ದ ಅಗ್ನಿ ಪರೀಕ್ಷೆ ಇನ್ನೇನು ಬಂದೇ ಬಿಟ್ಟಿದೆ. ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಕಾತರದಿಂದ ಕಾಯುತ್ತಿರುವ ಪರೀಕ್ಷೆಯ ವೇಳಾಪಟ್ಟಿಯನ್ನು ಎಸ್.ಎಸ್​.ಎಲ್​.ಸಿ ಬೋರ್ಡ್​ ಬಿಡುಗಡೆ ಮಾಡಿದೆ.
ಪರೀಕ್ಷೆ ದಿನಾಂಕ ಪ್ರಕಟ ಮಾಡಿರುವ ಎಸ್.ಎಸ್.ಎಲ್.​ಸಿ ಬೋರ್ಡ್, ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೂ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
ಈ ಸಂಬಂಧ ಪರೀಕ್ಷಾ ಮಂಡಳಿ ಸುತ್ತೋಲೆ ಬಿಡುಗಡೆ ಮಾಡಿದೆ. ಈ ಸುತ್ತೋಲೆಯಲ್ಲಿ ‘ಏಪ್ರಿಲ್-2023ರ ಎಸ್.ಎಸ್‌.ಎಲ್.ಸಿ. ಮುಖ್ಯ ಪರೀಕ್ಷೆಯನ್ನು ದಿನಾಂಕ: 31.03.2023 ರಿಂದ 15,04,2023 ರವರೆಗೆ ನಡೆಸಲು ತೀರ್ಮಾನಿಸಿ, ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದ್ದು, ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಶಾಲೆಯ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸಿ, ವಿದ್ಯಾರ್ಥಿಗಳಿಗೆ ಖುದ್ದಾಗಿ ಗಮನಿಸಲು ಸೂಚಿಸುವುದು’ ಎಂದು ಬರೆಯಲಾಗಿದೆ.
ಸದ್ಯ ಪ್ರಕಟಿಸಿರುವ ವೇಳಾಪಟ್ಟಿ ಹೀಗಿದೆ:
ಮಾರ್ಚ್ 31 – ಪ್ರಥಮ ಭಾಷೆಏಪ್ರಿಲ್ 4 – ಗಣಿತ/ಸಮಾಜಶಾಸ್ತ್ರಏಪ್ರಿಲ್ 6 – ದ್ವಿತೀಯ ಭಾಷೆಏಪ್ರಿಲ್ 8 – ಅರ್ಥಶಾಸ್ತ್ರ,ಏಪ್ರಿಲ್ 10 – ಪೊಲಿಟಿಕಲ್ ಸೈನ್ಸ್/ವಿಜ್ಞಾನಏಪ್ರಿಲ್ 12 – ತೃತೀಯ ಭಾಷೆ ಹಿಂದಿಏಪ್ರಿಲ್ 15 – ಸಮಾಜ ವಿಜ್ಞಾನ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
